ಬೆಂಗಳೂರು: ಕಳೆದ ಕೆಲ ದಿನಗಳಿಂದ ನಟ ದುನಿಯಾ ವಿಜಯ್ ಪುತ್ರಿ ಮೋನಿಕಾ ವಿಜಯ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿ ಇದೀಗ ಅಧಿಕೃತವಾಗಿದ್ದು, ತಮ್ಮ ತಂದೆ ವಿಜಯ್ ನಾಯಕನಾಗಿ ನಟಿಸಲಿರುವ 29ನೇ ಚಿತ್ರದಲ್ಲಿ ಪುತ್ರಿ ಮೋನಿಕಾ ಕೂಡ ಬಣ್ಣ ಹಚ್ಚಲಿದ್ದಾರೆ. ಸಿನಿಮಾಗಾಗಿ ಮೋನಿಕಾ ತಮ್ಮ ಹೆಸರನ್ನು ರಿತನ್ಯಾ ಎಂದು ಬದಲಿಸಿಕೊಂಡಿದ್ದಾರೆ.
ಗುರುವಾರ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಮೋನಿಕಾ ಈ ಚಿತ್ರದಲ್ಲಿ ನಟಿಸುವುದು ಖಾತರಿಯಾಗಿದ್ದು, ಸ್ವತಃ ದುನಿಯಾ ವಿಜಯ್ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ದುನಿಯಾ ವಿಜಯ್‌ಗೆ ನಾಯಕಿಯಾಗಿ ರಚಿತಾ ರಾಮ್ ನಟಿಸುತ್ತಿದ್ದು, ʼಜಂಟಲ್‌ಮ್ಯಾನ್ʼ, ʼಗುರು ಶಿಷ್ಯರುʼ ನಿರ್ದೇಶಕ, ʼಕಾಟೇರʼ ಬರಹಗಾರ ಜಡೇಶ್ ಕುಮಾರ್ ಹಂಪಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.
ಇನ್ನು ವಿಜಯ್ ಪುತ್ರಿ ಮೋನಿಕಾ ಸಿನಿಮಾದಲ್ಲಿ ನಟಿಸಬೇಕು ಎಂಬ ಗುರಿಯನ್ನು ಇಟ್ಟುಕೊಂಡಿದ್ದರು. ಹೀಗಾಗಿ ಸಾಕಷ್ಟು ತರಬೇತಿ ಪಡೆದು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮುಂಬೈನ ಅನುಪಮ್ ಖೇರ್ ಸ್ಟುಡಿಯೊದಲ್ಲಿ ನಟನೆ ತರಬೇತಿ ಪಡೆದಿರುವ ಮೋನಿಕಾ ಬೆಂಗಳೂರಿನಲ್ಲಿಯೂ ಅಗತ್ಯ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಸ್ಟಾರ್ ಕಿಡ್ ಎಂಟ್ರಿಯಾಗಿದೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…