‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಮುಂದಿನ ವಾರ ಅಂದರೆ ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಜಯ್, ಚಿತ್ರ ವೀಕ್ಷಿಸಲು ಆಹ್ವಾನಿಸಿದ್ದಾರೆ.
‘ಭೀಮ’ ಚಿತ್ರವನ್ನು ವೀಕ್ಷಿಸುವುದಕ್ಕೆ ಮುಖ್ಯಮಂತ್ರಿಗಳು ಮತ್ತು ಇತರೆ ಸಚಿವರನ್ನು ಆಹ್ವಾನಿಸುವುದಾಗಿ ‘ದುನಿಯಾ’ ವಿಜಯ್ ಕೆಲವು ದಿನಗಳ ಹಿಂದಷ್ಟೇ ಹೇಳಿಕೊಂಡಿದ್ದರು. ಅದಕ್ಕೆ ಸರಿಯಾಗಿ, ಮುಖ್ಯಮಂತ್ರಿಗಳನ್ನು ಅವರ ಗೃಹಕಚೇರಿಯಲ್ಲಿ ಭೇಟಿ ಮಾಡಿರುವ ವಿಜಯ್, ‘ಭೀಮ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವುದರ ಜೊತೆಗೆ ಚಿತ್ರವನ್ನು ವೀಕ್ಷಿಸಲು ಆಹ್ವಾನಿಸಿದ್ದಾರೆ ಎಂದು ಹೇಳಲಾಗಿದೆ.
ಆದರೆ, ರಾಜ್ಯದಲ್ಲಿ ಮಳೆ ಹೆಚ್ಚಾಗಿರುವ ಮತ್ತು ಕೆಲವು ಕಡೆ ಸಾಕಷ್ಟು ಸಮಸ್ಯೆಗಳು ಎದುರಾಗಿರುವ ಕಾರಣ, ಇಂತಹ ಸಂದರ್ಭದಲ್ಲಿ ಚಿತ್ರ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವುದು ಕಷ್ಟವಿರುವುದರಿಂದ, ಪರಿಸ್ಥಿತಿ ತಹಬಂದಿಗೆ ನಂತರ ಮುಂದಿನ ವಾರ ಚಿತ್ರ ನೋಡುವುದಾಗಿ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು, ಚಿತ್ರದ ಪ್ರಚಾರವನ್ನು ‘ದುನಿಯಾ’ ವಿಜಯ್ ಜೋರಾಗಿಯೇ ಮಾಡುತ್ತಿದ್ದು, ಇತ್ತೀಚೆಗೆ ಹಲವು ಕಾಲೇಜಿಗಳಿಗೆ ಭೇಟಿ ಕೊಟ್ಟು ಚಿತ್ರದ ಬಗ್ಗೆ ಪ್ರಚಾರ ಮಾಡಿದ್ದಾರೆ. ‘ಭೀಮ’ ಚಿತ್ರದಲ್ಲಿ ಯುವಜನಾಂಗದವರನ್ನು ಡ್ರಗ್ಸ್ ಹೇಗೆ ಕಾಡುತ್ತಿದೆ ಎಂಬ ವಿಷಯವನ್ನು ವಿಜಯ್ ಹೇಳಿದ್ದು, ಈ ನಿಟ್ಟಿನಲ್ಲಿ ಹಲವು ಕಾಲೇಜುಗಳಿಗೆ ಭೇಟಿ ನೀಡಿ ಚಿತ್ರದ ಪ್ರಚಾರ ಮಾಡುವುದರ ಜೊತೆಗೆ, ಡ್ರಗ್ಸ್ ಹಾವಳಿ ಕುರಿತು ಜಾಗೃತಿ ಮೂಡಿಸಿ ಬಂದಿದ್ದಾರೆ.
‘ಸಲಗ’ ನಂತರ ವಿಜಯ್ ನಿರ್ದೇಶಿಸುತ್ತಿರುವ ಎರಡನೆಯ ಕಥೆ ಇದು. ಈ ಚಿತ್ರಕ್ಕೆ ‘ದುನಿಯಾ’ ವಿಜಯ್ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದು, ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ಅಶ್ವಿನಿ ನಟಿಸಿದ್ದಾರೆ. ಮಿಕ್ಕಂತೆ ಅಚ್ಯುತ್ ಕುಮಾರ್, ರಂಗಾಯಣ ರಘು, ರಾಘು ಶಿವಮೊಗ್ಗ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚರಣ್ರಾಜ್ ಸಂಗೀತ ಈ ಚಿತ್ರಕ್ಕಿದೆ. ‘ಭೀಮ’ ಚಿತ್ರವನ್ನು ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಜೊತೆಯಾಗಿ ನಿರ್ಮಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…