ಮನರಂಜನೆ

ಸಾಮಾಜಿಕ ಪಿಡುಗಿನ ವಿರುದ್ಧ ‘ಮಾರುತ’ನ ಹೋರಾಟ …

 

‘ದುನಿಯಾ’ ವಿಜಯ್‍ ಅಭಿನಯದಲ್ಲಿ ಎಸ್‍. ನಾರಾಯಣ್‍ ಇದಕ್ಕೂ ಮೊದಲು ‘ಚಂಡ’ ಹಾಗೂ ‘ದಕ್ಷ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಈಗ ಮೂರನೆಯ ಚಿತ್ರವಾಗಿ, ‘ಮಾರುತ’ ಮೂಡಿಬಂದಿದೆ. ಈ ಚಿತ್ರದಲ್ಲಿ ವಿಜಯ್‍ ಜೊತೆಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್‍ ಮಂಜು ಸಹ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಈ ಚಿತ್ರವನ್ನು ಕೆ. ಮಂಜು ಹಾಗೂ ರಮೇಶ್ ಯಾದವ್ ಜೊತೆಯಾಗಿ ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ. ಈ ಹಿಂದೆ ‘ದುನಿಯಾ’ ವಿಜಯ್ ನಟನೆಯ ‘ರಜನಿಕಾಂತ’ ಹಾಗೂ ‘ಶಂಕರ್‍ ಐ.ಪಿ.ಎಸ್’ ಚಿತ್ರಗಳನ್ನು ಕೆ. ಮಂಜು ನಿರ್ಮಿಸಿದ್ದರು. ನಿರ್ಮಾಪಕ ರಮೇಶ್ ಯಾದವ್ ಅವರಿಗೆ ವಿಜಯ್ ಅವರ ಜೊತೆಗೆ ಇದು ಮೊದಲ ಚಿತ್ರ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಜಾರಿಯಲ್ಲಿದೆ.

‘ಮಾರುತ’ ಪ್ರತಿಯೊಬ್ಬರ ಮನೆಯ ಕಥೆ ಎಂದು ಚಿತ್ರತಂಡ ಹೇಳಿಕೊಂಡಿದೆ. ನಮಗೆ ಗೊತ್ತಿಲ್ಲದ ಹಾಗೆ ನಮ್ಮನ್ನೆಲ್ಲಾ ಅವರಿಸಿಕೊಂಡಿರುವ ಒಂದು ಭೂತದಿಂದ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಸುತ್ತ ಈ ಚಿತ್ರ ಸುತ್ತುತ್ತದಂತೆ.

ಈ ಚಿತ್ರಕ್ಕೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಧಾರವಾಡ, ಕೂಡಲ ಸಂಗಮ, ಸವದತ್ತಿ, ಬೆಳಗಾವಿ, ಗೋವಾ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇತ್ತೀಚೆಗೆ ಬೆಂಗಳೂರು ಸಮೀಪ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆಯಲಾಯಿತು.

‘ಮಾರುತ’ ಚಿತ್ರದಲ್ಲಿ ವಿಜಯ್, ಶ್ರೇಯಸ್ ಮಂಜು ಜೊತೆಗೆ ಬೃಂದಾ ಆಚಾರ್ಯ, ಸಾಧು ಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ ಮುಂತಾದವರು ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿ. ರವಿಚಂದ್ರನ್ ಸಹ ನಟಿಸಿದ್ದಾರಂತೆ.

ಎಸ್. ನಾರಾಯಣ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಪಿ.ಕೆ.ಹೆಚ್, ದಾಸ್ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

8 mins ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

2 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

2 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

2 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

3 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

3 hours ago