ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್‌ವುಡ್ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ ಲಗ್ಗೆ ಇಟ್ಟಿದೆ.
ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ.
ತೆರೆಮರೆಯಲ್ಲೆ ಇದ್ದ ಪ್ರತಿಭಾವಂತ ನಟ ಅಕ್ಷಯ್ ಖನ್ನಾ ಈ ಚಿತ್ರದಿಂದ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ. ಇದರ ಪರಿಣಾಮವಾಗಿ ಅವರು ‘ದೃಶ್ಯಂ 3’ ನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಆಗಿರುವುದು ದುಬಾರಿ ಸಂಭಾವನೆಯೂ ಒಂದು. ‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ರೆಹಮಾನ್ ಡಕಾಯಿತ್ ಎಂಬ ಪಾತ್ರವನ್ನು ಮಾಡಿದ್ದಾರೆ. ಇದು ವಿಲನ್ ಪಾತ್ರ. ಈ ಪಾತ್ರಕ್ಕಾಗಿ ಅವರು 2.5 ಕೋಟಿಯಿಂದ 3 ಕೋಟಿ ರೂಪಾಯಿ ತನಕ ಸಂಭಾವನೆ ಪಡೆದಿದ್ದರು ಎಂಬ ಮಾಹಿತಿ ಹರಿದಾಡುತ್ತಿದೆ. ‘ಧುರಂಧರ್’ ಸೂಪರ್ ಹಿಟ್ ಆಗಿದ್ದೇ ತಡ, ಅಕ್ಷಯ್ ಖನ್ನಾ ಅವರು ಏಕಾಏಕಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:-ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ
‘ದೃಶ್ಯಂ 3’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಪಾತ್ರ ಮಾಡಬೇಕಿತ್ತು. ಆದರೆ ಈಗ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿರುವುದರಿಂದ ನಿರ್ಮಾಪಕರಿಗೆ ಚಿಂತೆ ಶುರುವಾಗಿದೆ. ಅಲ್ಲದೇ, ಅಕ್ಷಯ್ ಖನ್ನಾ ಅವರು ತಮ್ಮ ಪಾತ್ರದ ಲುಕ್ ಕೂಡ ಬದಲಾಗಬೇಕು ಎಂದು ಹಠ ಹಿಡಿದಿದ್ದಾರಂತೆ. ಈ ವಿಚಾರದಲ್ಲಿ ಚಿತ್ರತಂಡದ ಜೊತೆ ಮಾತುಕಥೆ ನಡೆದು, ಸಫಲವಾಗದ ಪರಿಣಾಮ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಆದರೆ ಈ ಎಲ್ಲಾ ಅಂತೆ ಕಂತೆಗಳಿಗೆ ಚಿತ್ರತಂಡವಾಗಲಿ ಅಥವಾ ನಟ ಅಕ್ಷಯ್ ಖನ್ನಾ ಆಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು…
ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ…
ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ…
ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…
ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…