Mysore
26
overcast clouds

Social Media

ಸೋಮವಾರ, 23 ಜೂನ್ 2025
Light
Dark

ದರ್ಶನ್‌ಗೆ ಜಾಮೀನು ಸಿಗುತ್ತಿದ್ದಂತೆ ದುರ್ಗಾದೇವಿಗೆ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಇಂದು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ದುರ್ಗಾದೇವಿಗೆ ಪೂಜೆ ಸಲ್ಲಿಸಿದ್ದಾರೆ.

ಹೈಕೋರ್ಟ್‌ ಇಂದು ಎ2 ಆರೋಪಿ ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಪತಿ ದರ್ಶನ್‌ಗೆ ಜಾಮೀನು ಸಿಕ್ಕಿರುವುದರಿಂದ ವಿಜಯಲಕ್ಷ್ಮೀ ದುರ್ಗಾದೇವಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಆದಷ್ಟು ಬೇಗ ಗುಣಮುಖರಾಗುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.

 

Tags:
error: Content is protected !!