ಮನರಂಜನೆ

ಒಂದು ತಿಂಗಳು ಮುಂದಕ್ಕೆ ಹೋಯ್ತು ’ಎಕ್ಕ’ ಚಿತ್ರದ ಬಿಡುಗಡೆ

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍.06ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜುಲೈ.18ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ಚಿತ್ರತಂಡವು ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ.

`ಎಕ್ಕ’ ಚಿತ್ರದ ಚಿತ್ರೀಕರಣ ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿತ್ತು. ಮುಹೂರ್ತದ ದಿನವೇ ಚಿತ್ರವನ್ನು ಜೂನ್‍.06ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಚಿತ್ರದ ಬಿಡುಗಡೆ ಹತ್ತಿರ ಬಂದರೂ, ಚಿತ್ರದ ಕೆಲಸಗಳು ಪೂರ್ತಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿತ್ರದ ಬಿಡುಗಡೆಯನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಜುಲೈ.18ರಂದು ಚಿತ್ರ ಬಿಡುಗಡೆಯಾಗಲಿದೆ.

ರೋಹಿತ್‍ ಪದಕಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಯುವಗೆ ಸಂಜನಾ ಆನಂದ್‍ ಮತ್ತು ಸಂಪದ ನಾಯಕಿಯರಾಗಿ ನಟಿಸಿದ್ದು, ಮಿಕ್ಕಂತೆ ಅತುಲ್ ಕುಲಕರ್ಣಿ, ಆದಿತ್ಯ, ಶ್ರುತಿ, ಪೂರ್ಣಚಂದ್ರ ಮೈಸೂರು, ಪುನೀತ್‍ ರುದ್ರನಾಗ್‍, ಸಾಧು ಕೋಕಿಲ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವನ್ನು ಕನ್ನಡದ ಮೂರು ಜನಪ್ರಿಯ ನಿರ್ಮಾಣ ಸಂಸ್ಥೆಗಳಾದ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರವನ್ನು ಅಶ್ವಿನಿ ಪುನೀತ್‍ ರಾಜಕುಮಾರ್, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಟೀಸರ್‍ ಬಿಡುಗಡೆ ಮಾಡಲಾಗಿದೆ. ಒಂದು ನಿಮಿಷ ಒಂಬತ್ತು ಸೆಕೆಂಡ್‌ ಇರುವ ಟೀಸರ್‌ನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಮಗು-ಮೃಗ ಎಂದು ಮಸ್ತ್‌ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಇದು ಇಲ್ಲಿಗೆ ನಿಲ್ಲೋದಿಲ್ಲ …’ ಎಂದು ದೊಡ್ಡದಾಗಿ ಏನೋ ಸೂಚನೆ ಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago