ಮನರಂಜನೆ

‘ಏಳುಮಲೆ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ರಕ್ಷಿತಾ ಪ್ರೇಮ್ ಸಹೋದರ ರಾಣ, ‘ಏಳುಮಲೆ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಈಗಾಗಲೇ ಗೊತ್ತಿರದೆ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಏಕ್‍ ಲವ್‍ ಯಾ’ ಚಿತ್ರದ ನಂತರ ರಾಣ ಅಭಿನಯಿಸುತ್ತಿರುವ ಎರಡನೇ ಚಿತ್ರ ಇದು. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ನಿರ್ದೇಶನ ಮಾಡಿರುವ ಈ ಚಿತ್ರವು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಸೆ..05ರಂದು ಬಿಡುಗಡೆಯಾಗುತ್ತಿದೆ.

ತರುಣ್ ಸುಧೀರ್ ಮತ್ತು ಅಟ್ಲಾಂಟ ನಾಗೇಂದ್ರ ಜೊತೆಗೆ ನಿರ್ಮಿಸುತ್ತಿರುವ ‘ಏಳುಮಲೆ’ ಚಿತ್ರವು ತನ್ನ ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ‘ಏಳುಮಲೆ’ ಸಿನಿಮಾದಲ್ಲಿ ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದ್ದು, ಚಾಮರಾಜನಗರ, ಸೇಲಂ, ಈರೋಡ್‌ ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದು ಸಂಘರ್ಷದ ಕಥೆಯಲ್ಲ. ಇದೊಂದು ಪ್ರೇಮಕಥೆ. 90ರ ದಶಕದ ಕಾಲಘಟ್ಟದಲ್ಲಿ ನಡೆದ ಕಥೆಯನ್ನು ಈ ಚಿತ್ರ ಹೇಳುತ್ತದೆ. ಚಿತ್ರಕ್ಕೆ ‘ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ’ ಎಂಬ ಟ್ಯಾಗ್‍ಲೈನ್‍ ನೀಡಲಾಗಿದೆ. ಈ ಚಿತ್ರವು ಕನ್ನಡವಲ್ಲದೆ ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ.

‘ಏಳುಮಲೆ’ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಅದ್ವೈತ್‌ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ಡಿ ಇಮ್ಮನ್‌ ಸಂಗೀತ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ…

23 seconds ago

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

8 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

8 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

9 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

9 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

9 hours ago