ಮಗುವನ್ನು ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್ ಸ್ಪರ್ಧಿ ಸೋನುಗೌಡ ಅವರನ್ನು ಬ್ಯಾಡರ ಹಳ್ಳಿ ಪೊಲೀಸರು ಇಂದು (ಮಾ.೨೨) ಬಂಧಿಸಿದ್ದಾರೆ.
ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದಡಿಯಲ್ಲಿ ಸೋನು ವಿರದ್ಧ ಪ್ರಕರಣ ದಾಖಲಾಗಿದ್ದು, ಮಕ್ಕಳ ರಕ್ಷಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಾಚರಣೆ ವೇಳೆ ಸೋನು ಗೌಡ ಅವರ ಬಂಧನವಾಗಿದೆ.
ಸ್ವಲ್ಪ ದಿನಗಳ ಹಿದೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಗುವನ್ನು ದತ್ತು ಪಡೆದ ಬಗ್ಗೆ ಸ್ವತಃ ಸೋನು ಗೌಡ ಅವರೇ ಮಾಹಿತಿ ಹಂಚಿಕೊಂಡಿದ್ದರು. ಅದರಲ್ಲಿ ಆ ಮಗುವಿನ ಪರಿಚಯ ಕೂಡಾ ಮಾಡಿಕೊಟ್ಟಿದ್ದರು.
ಉತ್ತರ ಕರ್ನಾಟಕದ 8 ವರ್ಷದ ಮಗು ಅದಾಗಿದ್ದು, ಸಿಂಪತಿ ಗಿಟ್ಟಿಸಿಕೊಂಡು ಸೆಲೆಬ್ರಿಟಿ ಆಗಲು ಸೋನು ಮುಂದಾಗಿದ್ದರು ಎನ್ನುವ ಆರೋಪವಿದ್ದು, ದತ್ತು ಪಡೆಯುವ ಯಾವುದೇ ನಿಯಮವನ್ನು ಪಾಲಿಸದೇ ಇರುವ ಕಾರಣಕ್ಕಾಗಿ ಮಕ್ಕಳ ಹಕ್ಕು ಕಸಿದಿರುವ ಆರೋಪ ಸೋನು ಮೇಲಿದೆ.
ಮಗುವನ್ನ ದತ್ತು ಪಡೆದ ಮೇಲೆ ಸುಳ್ಳು ಪ್ರಚಾರ ಪಡೆಯಲು ಸೋನು ತಂತ್ರ ರೂಪಿಸಿದ್ದಾರೆ ಎಂದು ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ.





