ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ.
ಸಂಜು ವೆಡ್ಸ್ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್ ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಮಂಗಳವಾರ ಫಿಲ್ಸ್ ಚೇಂಬರ್‌ಗೆ ದೂರು ಸಲ್ಲಿಸಿದ್ದಾರೆ.
ರಚಿತಾ ರಾಮ್ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮತ್ತು ನಂತರ ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹೀಗಾಗಿ ನಟಿಯ ವಿರುದ್ಧ ಚಿತ್ರತಂಡ ದೂರು ನೀಡಿದ್ದು, ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದ ಒತ್ತಾಯಿಸಿದೆ.
ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಯಾವುದೇ ಸಪೋರ್ಟ್ ಮಾಡಿಲ್ಲ. ರಾಕ್‌ಲೈನ್ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದ್ದರು ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಮಾಡಿಲ್ಲ. ನಾವೇನು ಅವರಿಗೆ ಪೇಮೆಂಟ್ ಕಮ್ಮಿ ಕೊಟ್ಟಿಲ್ಲ ಎಂದು ನಿರ್ದೇಶಕ ನಾಗಶೇಖರ್ ಹಾಗೂ ನಾಯಕ ನಟ ಶ್ರೀನಗರ ಕಿಟ್ಟಿ ಫಿಲ್ಮ್ ಚೇಂಬರ್ಗ್‌ಗೆ ದೂರು ನೀಡಿದ್ದಾರೆ.
ಸಿನಿಮಾ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿದ್ದಾರೆ.
ಈ ದೂರು ಕುರಿತು ನಟಿ ರಚಿತಾ ರಾಮ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…