ಮನರಂಜನೆ

ಚಿತ್ರವಾಯ್ತು ‘ಮಂಕುತಿಮ್ಮನ ಕಗ್ಗ’; ಡಿವಿಜಿ ಗುರುಗಳ ಪಾತ್ರದಲ್ಲಿ ರಾಮಕೃಷ್ಣ

ಡಾ.ಡಿ.ವಿ. ಗುಂಡಪ್ಪ ಅತ್ಯಂತ ಜನಪ್ರಿಯ ಕೃತಿ ‘ಮಂಕುತಿಮ್ಮನ ಕಗ್ಗ’. ಡಿವಿಜಿ ಮತ್ತು ಕಗ್ಗ ಎರಡನ್ನೂ ಇಟ್ಟುಕೊಂಡು ‘ಮಂಕುತಿಮ್ಮನ ಕಗ್ಗ’ ಎಂಬ ಚಿತ್ರ ಸದ್ದಿಲ್ಲದೆ ತಯಾರಾಗಿದೆ.

ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ. ರವಿ), ಡಿ.ವಿ.ಜಿ ಅವರ ‘ಮಂಕುತಿಮ್ಮನ ಕಗ್ಗ’ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್.ಎ ಶಿವಕುಮಾರ್ ಅವರು ನಿರ್ಮಿಸಿರುವ ಈ ಚಿತ್ರದ ‘ಸ್ವಾಮಿದೇವನೇ …’ ಎಂಬ ಹಾಡು ವರಮಹಾಲಕ್ಷ್ಮೀ ಹಬ್ಬದಂದು ಎ2 ಚಾನಲ್‍ನಲ್ಲಿ ಬಿಡುಡೆಯಾಗಿದೆ.

ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ಈ ಗೀತೆಯನ್ನು‌ ‘ಮಂಕುತಿಮ್ಮನ ಕಗ್ಗ’ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ‌ಎ.ಟಿ.ರವೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಸದ್ದಿಲ್ಲದೆ ಮಧುಗಿರಿ ಸುತ್ತಮುತ್ತ ತಯಾರಾಗಿದ್ದು, ಸೆನ್ಸಾರ್‍ ಸಹ ಆಗಿದೆ.

‘ಮಂಕುತಿಮ್ಮನ ಕಗ್ಗ’ ಚಿತ್ರದಲ್ಲಿ ಬರೀ ಕಗ್ಗ ಹುಟ್ಟಿದ ರೀತಿ ಅಥವಾ ಅದು ಸಮಾಜದ ಮೇಲಾದ ಪರಿಣಾಮದ ಕುರಿತಾಗಿ ಅಷ್ಟೇ ಅಲ್ಲ, ಚಿತ್ರದಲ್ಲಿ‌‌ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಡಿ.ವಿ.ಜಿ ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಈ ಕಥೆಯನ್ನು ವಿಸ್ತರಿಸುವುದರ ಜೊತೆಗೆ, ‌ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ ನಿರ್ದೇಶಕ ರಾಜ ರವಿಶಂಕರ್. ಸಿ. ನಾರಾಯಣ್ ಛಾಯಾಗ್ರಹಣ ಹಾಗೂ ಆರ್ ಡಿ ರವಿ ಸಂಕಲನ ಈ ಚಿತ್ರಕ್ಕಿದೆ‌.

ಭೂಮಿಕಾ

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

52 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

54 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

56 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

58 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

1 hour ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago