ಬಾಲಿವುಡ್ ನಟ ಶರದ್ ಕಪೂರ್ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಟನ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಮನೆಗೆ ಕರೆಸಿ ನನ್ನನ್ನು ಅಸಹ್ಯವಾಗಿ ನಡೆಸಿಕೊಂಡಿದ್ದಾರೆ ಎಂದು 32 ವರ್ಷದ ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.
ಶರದ್ ಕಪೂರ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಈಕೆಯೊಂದಿಗೆ ಸಂವಹನ ನಡೆಸುತ್ತಿದ್ದರು ಎನ್ನಲಾಗಿದ್ದು, ತುಂಬಾ ಹತ್ತಿರವಾದ ನಂತರ ವಿಡಿಯೋ ಕರೆ ಮೂಲಕವು ಸಂಪರ್ಕದಲ್ಲಿರುತ್ತಿದ್ದರು ಎಂದು ಹೇಳಲಾಗುತ್ತಿದೆ.
ಮಹಿಳೆಯ ಪರಿಚಯ ಆದ ನಂತರ ತನ್ನ ಆಫೀಸ್‌ಗೆ ಬರಲು ಶರದ್ ಹೇಳಿದ್ದಾರೆ. ಆದರೆ ಅವರು ಕಳುಹಿಸಿದ ವಿಳಾಸಕ್ಕೆ ಹೋದ ನಂತರ ಗೊತ್ತಾಯಿತು ಅದು ಮನೆ ಅಂತ. ಮನೆಯಲ್ಲಿ ಶರತ್ ನನ್ನ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಬಲವಂತವಾಗಿ ಸ್ಪರ್ಶಿಸಿ ಕೋಣೆಗೆ ಕರೆದಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಘಟನೆಯ ನಂತರ ಶರದ್ ನನಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಶರದ್ 1994ರಲ್ಲಿ ಮೇರಾ ಪ್ಯಾರಾ ಭಾರತ್ ಸಿನಿಮಾದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು. ನಂತರ ಜೋಶ್, ಕಾರ್ಗಿಲ್ ಎಲ್‌ಒಸಿ, ಲಕ್ಷ್ಯ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ 2022ರಲ್ಲಿ ನೋ ಮಿನ್ಸ್ ನೋ ಮತ್ತು ದಿ ಗುಡ್ ಮಹಾರಾಜ ಎಂಬ ಸಿನಿಮಾಗಳಲ್ಲೂ ನಟಿಸಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…