ಸಾಮಾನ್ಯವಾಗಿ ಒಂದು ಚಿತ್ರ ಬಿಡುಗಡೆಯಾಗಿ, ಆ ನಂತರ ಅದರ ಮುಂದುವರೆದ ಭಾಗ ಬರುವುದು ವಾಡಿಕೆ. ಆದರೆ, ಇಲ್ಲೊಂದು ಚಿತ್ರದ ಮುಂದುವರೆದ ಭಾಗ ಮೊದಲು ಬರುತ್ತಿದೆ. ಆ ನಂತರ ನಿಜವಾದ ಕಥೆ ತೆರೆಯ ಮೇಲೆ ತೆರೆದುಕೊಳ್ಳುತ್ತಿದೆ. ಆ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಬಿಡುಗಡೆಗೆ ಸಜ್ಜಾಗಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಟೀಸರ್ ಬಿಡುಗಡೆಯಾಗಿದೆ.
ಆ ಚಿತ್ರದ ಹೆಸರು ‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’. ಇದು ಚಿತ್ರದ ಎರಡನೇ ಭಾಗ. ಅದಕ್ಕೆ ಸರಿಯಾಗಿ ಚಿತ್ರದ ಶೀರ್ಷಿಕೆಯಲ್ಲೇ ‘ಆಪರೇಷನ್ ಲಂಡನ್ ಕೆಫೆ’ಯ ನಂತರ ಎಂದು ನಮೂದಿಸಲಾಗಿದೆ. ಹಾಗಾದರೆ, ‘ಆಪರೇಷನ್ ಲಂಡನ್ ಕೆಫೆ’ ಯಾವಾಗ? ಎಂಬ ಪ್ರಶ್ನೆ ಬರಬಹುದು. ಈ ಚಿತ್ರದ ಬಿಡುಗಡೆಯ ನಂತರ.
ಅಂದಹಾಗೆ, ‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಚಿತ್ರವನ್ನು ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದಡಿಯಲ್ಲಿ ವಿಜಯ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ಹವರಾಲ್ ಹಾಗೂ ದೀಪಕ್ ರಾಣೆ ನಿರ್ಮಾಣ ಮಾಡುತ್ತಿದ್ದಾರೆ. ಸಡಗರ ರಾಘವೇಂದ್ರ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ, ಬಿ. ಸುರೇಶ, ಶಿವಾನಿ ಸುರ್ವೆ, ಅರ್ಜುನ್ ಕಾಪಿಕ್ಕಾಡ್, ವಿರಾಟ್ ಮಡಕೆ ಮುಂತಾದವರು ನಟಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸಡಗರ ರಾಘವೇಂದ್ರ, ‘ನಕ್ಸಲಿಸಂ ಹಿನ್ನೆಲೆಯಾಗಿಟ್ಟುಕೊಂಡಿರುವ ಮಾಡಿರುವ ಕಥೆ ಇದು. ಹಾಗಂತ ಇಲ್ಲಿ ನಕ್ಸಲಿಸಂನ್ನು ವೈಭವಿಕರಿಸಿಲ್ಲ. ಹಾಗೆಯೇ ಯಾವೊಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ. ಭಾವನೆಗಳು ಸಿದ್ಧಾಂತಗಳನ್ನು ಮೀರಿಸಿದಾಗ ಏನೆಲ್ಲ ಆಗುತ್ತದೆ ಎನ್ನುವುದೇ ಚಿತ್ರ ಕಥೆ. ಇದು ಎರಡನೆಯ ಭಾಗ. ಮೊದಲ ಭಾಗ ಆ ನಂತರ ಬರುತ್ತದೆ. ಮುಂದುವರೆದ ಭಾಗದ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ. ಇದು ಮುಗಿದ ನಂತರ ಆ ಚಿತ್ರವನ್ನು ಕೈಗೆತ್ತಿಕೊಳ್ಳುತ್ತೇವೆ. ಉಡುಪಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ’ ಎಂದರು.
ಸಡಗರ ರಾಘವೇಂದ್ರ, ‘ಮುಂಗಾರು ಮಳೆ 2’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದಾಗ ನಾಯಕ ಕವೀಶ್ ಶೆಟ್ಟಿ ಸಹ ಆ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರಂತೆ. ಅವರ ಕಾರ್ಯವೈಖರಿ ನೋಡಿ, ಆಗಲೇ ಅವರ ಜೊತೆಗೆ ಒಂದು ಚಿತ್ರ ಮಾಡಬೇಕು ಅಂತಂದುಕೊಂಡಿದ್ದರಂತೆ. ಅದು ಈ ಚಿತ್ರದ ಮೂಲಕ ಕೈಗೂಡಿದೆ. ‘ಸಡಗರ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ಮೊದಲ ನಿರ್ದೇಶನದಲ್ಲಿ ಚಿತ್ರ ಮಾಡುವ ಆಸೆಯಿತ್ತು. ಈ ಚಿತ್ರದ ಮೂಲಕ ಅದು ಈಡೇರಿದೆ. ಚಿತ್ರೀಕರಣ ಬಹಳ ರಿಸ್ಕಿಯಾಗಿತ್ತು. ಶೂಟಿಂಗ್ ಸಮಯದಲ್ಲಿ ನನ್ನ ಕಾಲಿಗೆ ಪೆಟ್ಟಾಗಿ, ಚಿತ್ರ ಸಾಕಷ್ಟು ವಿಳಂಬವಾಯಿತು’ ಎಂದರು.
ಈ ಚಿತ್ರವನ್ನು ಕನ್ನಡ ಮತ್ತು ಮರಾಠಿಯಲ್ಲಿ ಏಕಕಾಲಕ್ಕೆ ಚಿತ್ರೀಕರಣ ಮಾಡಿದ್ದು, ಬೇರೆ ಭಾಷೆಗಳಿಗೆ ಡಬ್ ಮಾಡಲಾಗುತ್ತಿದೆ. ಅದೇ ಕಾರಣಕ್ಕೆ ಚಿತ್ರದಲ್ಲಿ ಶಿವಾನಿ ಸುರ್ವೆ ಸೇರಿದಂತೆ ಹಲವರು ಮರಾಠಿ ಕಲಾವಿದರು ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಮರಾಠಿ ಕಲಿತು ನಟಿಸಿರುವುದಾಗಿ ಹೇಳಿದ ಮೇಘಾ ಶೆಟ್ಟಿ, ‘ಎರಡೂ ಭಾಷೆಯ ಚಿತ್ರಗಳಲ್ಲಿ ಅದೇ ನಟ-ನಟಿಯರಿದ್ದರು. ಮರಾಠಿ ನಟರು ಕನ್ನಡ ಕಲಿತರೆ, ನಾವು ಮರಾಠಿ ಕಲಿತು ಚಿತ್ರೀಕರಣ ಮಾಡಿದ್ದೇವೆ. ಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದ್ದು, ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿರುವ ಖುಷಿಯಿದೆ’ ಎಂದರು ಮೇಘಾ ಶೆಟ್ಟಿ.
‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಚಿತ್ರಕ್ಕೆ ಆರ್.ಡಿ. ನಾಗಾರ್ಜುನ್ ಅವರ ಛಾಯಾಗ್ರಹಣ ಮತ್ತು ಪ್ರಾಂಶು ಝಾ ಅವರ ಸಂಗೀತವಿದೆ.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…