‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು. ಇದೀಗ ಚಿತ್ರವು ಇದೇ ಸೆ.18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ.
ಜೋಳಿಗೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಪಲ್ಲಕ್ಕಿ ರಾಧಾಕೃಷ್ಣ ಕಥೆ-ಚಿತ್ರಕಥೆ ರಚಿಸುವುದರ ಜೊತೆಗೆ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿ ಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ‘ಕೋಟೆ ನಾಡಿನ ನಾಗರ ಹಾವು’ ಎಂಬ ಅಡಿಬರಹವಿದೆ.
ಚಿತ್ರ ಬಿಡುಗಡೆಯ ಕುರಿತು ಮಾತನಾಡುವ ಪಲ್ಲಕ್ಕಿ ರಾಧಾಕೃಷ್ಣ, ’ಡಾ. ವಿಷ್ಣುವರ್ಧನ್ ಹುಟ್ಟುಹಬ್ದ, ಸೆಪ್ಟಂಬರ್.18ರಂದು ತೆರೆಗೆ ತರುವ ಯೋಜನೆ ಇತ್ತು. ಆದರೆ ಈಗಾಗಲೇ 10 ಸಿನಿಮಾಗಳು ಚಿತ್ರಮಂದಿರ ಗೇಟ್‌ನಲ್ಲಿ ನಿಂತಿವೆ. ಆದಕಾರಣ ಸಿನಿಪಂಡಿತರು, ಸಾಹಸ ಸಿಂಹ ಅಭಿಮಾನಿಗಳಿಗೆ ಪ್ರತ್ಯೇಕವಾಗಿ ಪ್ರದರ್ಶನ ಮಾಡಲು ಚಿಂತನೆ ನಡೆಸಲಾಗಿದೆ. ಮೈಸೂರು, ಚಿತ್ರದುರ್ಗ, ಶಿವಮೊಗ್ಗದಲ್ಲಿ ಹೆಚ್ಚು ಅಭಿಮಾನಿಗಳು ಇರುವುದರಿಂದ, ಒಂದು ದಿನದ ಗಳಿಕೆ ಹಣವನ್ನು ಅಭಿಮಾನ ಸಂಘದ ಸಮಾಜಮುಖಿ ಕಾರ್ಯಕ್ಕೆ ನೀಡಲಾಗುವುದು’ ಎಂದರು.
‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದಲ್ಲಿ ರಾಮಾಚಾರಿ ಪಾತ್ರವನ್ನು ಜಯಶ್ರೀರಾಜ್ ನಿರ್ವಹಿಸಿದ್ದಾರೆ. ಚಿತ್ರೀಕರಣದ ಅನುಭವ ಹಂಚಿಕೊಂಡು, ’ಪಾತ್ರಕ್ಕಾಗಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದೇನೆ. ಬದ್ದತೆಯಿಂದ ಪ್ರಯೋಗ ಮಾಡಿದ್ದೇನೆ’ ಎಂದರು.
ಮಿಕ್ಕಂತೆ ಪ್ರೇಮಾ ಗೌಡ, ಪ್ರದೀಪ್ ಶಾಸ್ತ್ರಿ, ಚೈತ್ರಾ, ಪ್ರಕಾಶ್ ಅರಸು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸ್ಯಾಂ ಸಂಗೀತ ಮತ್ತು ಎಂ.ಆರ್.ಸೀನು ಛಾಯಾಗ್ರಹಣವಿದೆ. ಈ ಚಿತ್ರಕ್ಕಾಗಿ ಬೆಂಗಳೂರು, ಬಾದಾಮಿ, ಬನಶಂಕರಿ, ಐಹೊಳೆ ಸುಂದರ ತಾಣಗಳಲ್ಲಿ ಶೂಟಿಂಗ್ ನಡೆಸಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…