ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ.
ದರ್ಶನ್ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್‌ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅಂಬರೀಷ್ ಅವರು ಪೋಸ್ಟ್‌ವೊಂದನ್ನು ಹಾಕಿದ್ದು, ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನು ತಿರುಚುತ್ತಾರೋ, ತಮ್ಮದೇ ತಪ್ಪನ್ನು ಇಟ್ಟುಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನು ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನು ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳುವುದು ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.
ಈ ಬೆಳವಣಿಗೆಯಿಂದ ದರ್ಶನ್ ಅಭಿಮಾನಿಗಳಿಗೆ ಶಾಕ್ ಎದುರಾಗಿದ್ದು, ಅಂಬರೀಷ್ ಫ್ಯಾಮಿಲಿ ಮೇಲೆ ನಟ ದರ್ಶನ್‌ಗೆ ಬೇಸರವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…