Mysore
32
scattered clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಅರಸು ಜೊತೆಯಾದ ಗಣೇಶ್‍: ಏಪ್ರಿಲ್‍ನಿಂದ ಹೊಸ ಚಿತ್ರ ಪ್ರಾರಂಭ

2014ರಲ್ಲಿ ಬಿಡುಗಡೆಯಾದ ‘ಲವ್‍ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ.

ಸದ್ಯ ‘ಯುರ್ಸ್ ಸಿನ್ಸಿಯರ್ಲಿ ರಾಮ್‍’ ಮತ್ತು ‘ಪಿನಾಕ’ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಗಣೇಶ್‍, ಏಪ್ರಿಲ್ 6 ರಂದು ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ‌. ಏಪ್ರಿಲ್.7 ರಿಂದ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಚಿತ್ರದ ಹೆಸರೇನು? ಈ ಹೊಸ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ? ಇದರ ವಿಶೇಷತೆಗಳೇನು? ಎಂಬ ವಿಷಯಗಳನ್ನು ಚಿತ್ರತಂಡ ಇನ್ನೂ ಹಂಚಿಕೊಂಡಿಲ್ಲ. ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ.

ವಿಶೇಷವೆಂದರೆ, ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಯಶಸ್ವಿಯಾದ ತೆಲುಗಿನ ‘ಹನುಮ್ಯಾನ್’ ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

SNT ಎಂಟರ್ಪ್ರೈಸಸ್ ಲಾಂಛನದಲ್ಲಿ ರವಿ ನಿರ್ಮಿಸುತ್ತಿರುವ ಈ ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ. ಸುಜ್ಞಾನ್ ಛಾಯಾಗ್ರಹಣವಿದೆ.

 

Tags:
error: Content is protected !!