2014ರಲ್ಲಿ ಬಿಡುಗಡೆಯಾದ ‘ಲವ್ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ.
ಸದ್ಯ ‘ಯುರ್ಸ್ ಸಿನ್ಸಿಯರ್ಲಿ ರಾಮ್’ ಮತ್ತು ‘ಪಿನಾಕ’ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಗಣೇಶ್, ಏಪ್ರಿಲ್ 6 ರಂದು ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಏಪ್ರಿಲ್.7 ರಿಂದ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಚಿತ್ರದ ಹೆಸರೇನು? ಈ ಹೊಸ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ? ಇದರ ವಿಶೇಷತೆಗಳೇನು? ಎಂಬ ವಿಷಯಗಳನ್ನು ಚಿತ್ರತಂಡ ಇನ್ನೂ ಹಂಚಿಕೊಂಡಿಲ್ಲ. ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ.
ವಿಶೇಷವೆಂದರೆ, ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಯಶಸ್ವಿಯಾದ ತೆಲುಗಿನ ‘ಹನುಮ್ಯಾನ್’ ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
SNT ಎಂಟರ್ಪ್ರೈಸಸ್ ಲಾಂಛನದಲ್ಲಿ ರವಿ ನಿರ್ಮಿಸುತ್ತಿರುವ ಈ ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ. ಸುಜ್ಞಾನ್ ಛಾಯಾಗ್ರಹಣವಿದೆ.
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…