ಮನರಂಜನೆ

ಈ ಬಾರಿ ಅಭಿಮಾನಿಗಳೊಂದಿಗೆ ಗಣೇಶ್‍ ಹುಟ್ಟುಹಬ್ಬವಿಲ್ಲ..

ಜುಲೈ ತಿಂಗಳಲ್ಲಿ ಗಣೇಶ್‍, ಯೋಗಿ, ಶ್ರೀನಗರ ಕಿಟ್ಟಿ, ಶಿವರಾಜಕುಮಾರ್‌, ಪ್ರಜ್ವಲ್, ರಿಷಭ್‍ ಶೆಟ್ಟಿ ಮುಂತಾದವರು ಕನ್ನಡದ ಹಲವು ಸ್ಟಾರ್ ‍ನಟರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ಸಾಲಿನಲ್ಲಿ ಮೊದಲಿಗೆ ಬರುವುದು ಗಣೇಶ್‍ ಹುಟ್ಟುಹಬ್ಬ. ಇಂದು ಗಣೇಶ್‍ ಹುಟ್ಟುಹಬ್ಬ. ಆದರೆ, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳದಿರುವುದಕ್ಕೆ ಗಣೇಶ್‍ ತೀರ್ಮಾನಿಸಿದ್ದಾರೆ.

ಗಣೇಶ್‍ ಪ್ರತಿ ಬಾರಿ ತಮ್ಮ ಅಭಿಮಾನಿಗಳ ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ರಾಜರಾಜೇಶ್ವರಿಯ ಗಣೇಶ್ ಮನೆ ಎದುರು ಅಭಿಮಾನಿಗಳು ಜುಲೈ. 01ರ ರಾತ್ರಿಯಿಂದಲೇ ಜಮಾಯಿಸುತ್ತಿದ್ದರು. ಆದರೆ, ಈ ಬಾರಿ ಚಿತ್ರೀಕರಣದಲ್ಲಿ ಭಾಗಿಯಾಗಿರುವುದರಿಂದ, ಗಣೇಶ್‍ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಗಣೇಶ್‍ ಸದ್ಯ ಮೂರು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ವಿಖ್ಯಾತ್‍ ನಿರ್ದೇಶನದ ‘ಯುವರ್ಸ್ ಸಿನ್ಸಿಯರ್ಲಿ ರಾಮ್‍’, ಧನಂಜಯ್‍ ನಿರ್ದೇಶನದ ‘ಪಿನಾಕ’ ಜೊತೆಗೆ ಅರಸು ಅಂತಾರೆ ನಿರ್ದೇಶನದ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ. ಈ ಪೈಕಿ, ಮೊದಲ ಎರಡು ಚಿತ್ರಗಳ ಚಿತ್ರೀಕರಣ ಸತತವಾಗಿ ನಡೆಯುತ್ತಿದ್ದು, ಆ ಚಿತ್ರೀಕರಣದಲ್ಲಿ ಗಣೇಶ್ ಭಾಗವಹಿಸುತ್ತಿರುವುದರಿಂದ, ಈ ಬಾರಿ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲವಂತೆ.

ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿರುವ ಗಣೇಶ್, ‘ಜುಲೈ.02 ನಾನು ಹುಟ್ಟಿದ ದಿನ. ಸಹಜವಾಗಿ ನನಗದು ನಿಮ್ಮ ಪ್ರೀತಿ ಹಾಗೂ ಅಭಿಮಾನವನ್ನು ಅತ್ಯಂತ ಸಮೀಪದಿಂದ ಕಣ್ತುಂಬಿಕೊಂಡು ಸಂಭ್ರಮಿಸುವ ದಿನ. ಆದರೆ, ಈ ಬಾರಿ ನಾನು ‘ಯುವರ್ಸ್ ಸಿನ್ಸಿಯರ್ಲಿ ರಾಮ್‍’ ಹಾಗೂ ‘ಪಿನಾಕ’ ಚಿತ್ರಗಳ ಹೊರಾಂಗಣ ಚಿತ್ರೀಕರಣಗಳಲ್ಲಿ ಭಾಗವಹಿಸಬೇಕಿರುವ ಕಾರಣ, ಜುಲೈ.02ರಂದು ನಾನು ನಿಮ್ಮೆಲ್ಲರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬ ನನಗೆ ಮತ್ತೊಂದಿಲ್ಲ. ಆದ ಕಾರಣ ಯಾರೂ ಮನೆಯ ಬಳಿ ಬರದೆ, ಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ತಾವುಗಳು ಇದ್ದಲ್ಲಿಂದಲೇ ನನಗೆ ಆಶಿಸಿ, ಆಶೀರ್ವದಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

11 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago