ಮನರಂಜನೆ

ದಳಪತಿ ವಿಜಯ್‌ ಅಭಿನಯದ GOAT ಚಿತ್ರದ ಟ್ರೇಲರ್ ರಿಲೀಸ್‌ ಡೇಟ್ ಫಿಕ್ಸ್

ಮೈಸೂರು: ಬಹು ನಿರೀಕ್ಷಿತಾ ದಳಪತಿ ವಿಜಯ್ ನಟನೆಯ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ಧಾರೆ. ಸೆಪ್ಟೆಂಬರ್ 5ಕ್ಕೆ ರಿಲೀಸ್ ಆಗಲಿರುವ ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ (GOAT) ಸಿನಿಮಾ ಟ್ರೇಲರ್ ಬಿಡುಗಡೆ ದಿನಾಂಕವನ್ನು ತಿಳಿಸಿದ್ಧಾರೆ ಇದರಿಂದ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಆಗಸ್ಟ್ 17 ರಂದು ಸಂಜೆ 5 ಗಂಟೆಗೆ ಸಿನಿಮಾ ಟ್ರೇಲರ್ ರಿಲೀಸ್ ಆಗಲಿದೆ ಎಂದು ಪೋಸ್ಟರ್‌ ಮೂಲಕ ಹಂಚಿಕೊಂಡಿದ್ದಾರೆ ಚಿತ್ರತಂಡ. ಈ ಚಿತ್ರದಲ್ಲಿ ದಳಪತಿ ವಿಜಯ್ ದ್ವಿಪಾತ್ರದಲ್ಲಿ ಕಾಣಿಕೊಳ್ಳುತ್ತಿದ್ದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಗೋಟ್ ಸಿನಿಮಾದಲ್ಲಿ ವಿಜಯ್ ಗನ್ ಹಿಡಿದು ಅಬ್ಬರಿಸುತ್ತಿರುವ ಪೋಸ್ಟ್ ಒಂದನ್ನು ಚಿತ್ರತಂಡ ರಿಲೀಸ್ ಮಾಡಿದ್ದು ಇದರಲ್ಲಿ ಸಿನಿಮಾದ ಟ್ರೇಲರ್ ರಿಲೀಸ್ ಡೇಟ್ ಕೂಡ ಪ್ರಕಟಿಸಿದ್ದಾರೆ.

ಇನ್ನು ವಿಜಯ್ ಅಭಿನಯದ ಈ ಆಕ್ಷನ್ ಸಿನಿಮಾವನ್ನು ವೆಂಕಟರ್ ಪ್ರಭು ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಲ್ಪಥಿ ಎಸ್ ಅಘೋರಂ, ಕಲ್ಪತಿ ಎಸ್.ಗಣೇಶ್ ಹಾಗೂ ಕಲ್ಪತಿ ಎಸ್.ಸುರೇಶ್ ಅವರು ಈ ಚಿತ್ರವನ್ನು ‘ಎಜಿಎಸ್ ಎಂಟರ್ಟೇನ್ಮೆಂಟ್’ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರ ಸೆಪ್ಟೆಂಬರ್ 5ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಐಮ್ಯಾಕ್ಸ್ ಫಾರ್ಮ್ಯಾಟ್ನಲ್ಲೂ ಲಭ್ಯ ಇರಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮತ್ತೊಂದು ಥ್ರಿಲ್ಲರ್ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ; ‘FIR 6 to 6’ ಟ್ರೇಲರ್‍ ಬಿಡುಗಡೆ

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್‍ ಕೊಂಡಾನ’, ‘ಜಾಗ್‍ 101’ ಮತ್ತು…

1 min ago

ಕುಶಾಲನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…

17 mins ago

ಬಸವನಕಟ್ಟೆ ಏರಿಯಲ್ಲಿ ಬಿರುಕು; ನೀರು ಪೋಲು

ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…

24 mins ago

ಹೊಲಗದ್ದೆಗಳಲ್ಲಿ ಹಕ್ಕಿಪಕ್ಷಿಗಳು ಏಕೆ ಬೇಕು?

• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…

43 mins ago

ಕೊಬ್ಬರಿ ಬೆಂಬಲ ಬೆಲೆ ಏರಿಕೆ

ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…

55 mins ago

ಭತ್ತದ ಕೊಯ್ಲಿಗೆ ಮುನ್ನ ಕೆಲವು ಸಲಹೆಗಳು

• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…

1 hour ago