ಮನರಂಜನೆ

ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಮುಂದಾಗಬೇಕು: ಬರಗೂರು ರಾಮಚಂದ್ರಪ್ಪ

ಡಾ.ಬರಗೂರು ರಾಮಚಂದ್ರಪ್ಪ ನಿರ್ದೇಶನದ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೇ ಕೆಲವು ವರ್ಷಗಳೇ ಆಗಿವೆ. ಈಗ ಅವರ ‘ಸ್ವಪ್ನ ಮಂಟಪ’ ಚಿತ್ರವು ಇದೇ ಜುಲೈ. 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ ‘ಸ್ವಪ್ನ ಮಂಟಪ’ ಚಿತರದಲ್ಲಿ ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಮುಂತಾದವರು ನಟಿಸಿದ್ದು, ಈ ಚಿತ್ರವು ಬರಗೂರರ ಜನಪ್ರಿಯ ಕಾದಂಬರಿಯನ್ನು ಆಧರಿಸಿದೆ. ಆ ಕಥೆಗೆ ಬರಗೂರರೇ ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ರಚಿಸಿ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿರುವ ಅವರು, ‘ನಾನು 25 ವರ್ಷಗಳ ಹಿಂದೆ ಬರೆದಿದ್ದ ‘ಸ್ವಪ್ನ ಮಂಟಪ’ ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪ’ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವುದೇ ಚಿತ್ರದ ಪ್ರಮುಖ ಕಥಾಹಂದರ. ಚಿತ್ರದ ನಾಯಕ – ನಾಯಕಿಯಾಗಿ ವಿಜಯ್ ರಾಘವೇಂದ್ರ, ರಂಜನಿ‌ ರಾಘವನ್ ಅಭಿನಯಿಸಿದ್ದು, ಇಬ್ಬರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡಿದೆ’ ಎಂದರು.

ಇಂತಹ ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಪ್ರತಿ ಜಿಲ್ಲೆಯಲ್ಲೂ 150 ಆಸನಗಳ ಚಿತ್ರಮಂದಿರಗಳನ್ನು ತೆರೆಯಬೇಕು ಎನ್ನುವ ಡಾ. ಬರಗೂರು ರಾಮಚಂದ್ರಪ್ಪ, ‘150 ಆಸನಗಳ ಜೊತೆಗೆ ಟಿಕೆಟ್ ದರ 100 ರೂಪಾಯಿಗಳನ್ನು ಮೀರಬಾರದು. ಆಗ ಹೆಚ್ಚಿನ ಜನರು ಸಿನಿಮಾ ನೋಡಲು ಮುಂದೆ ಬರುತ್ತಾರೆ. ಈ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ನಾನು ಕೆಲವು ದಿನಗಳ ಹಿಂದೆ ಕೊಟ್ಟಿದ್ದೇನೆ. ಸರ್ಕಾರ ಆದಷ್ಟು ಬೇಗ ಈ ಕಾರ್ಯ ಮಾಡಿದರೆ ಚಿತ್ರರಂಗಕ್ಕೆ ಅನುಕೂಲವಾಗುತ್ತದೆ’ ಎಂದರು.

ಪ್ರತಿಯೊಬ್ಬ ನಟನಿಗೂ ಇಂತಹ ಒಬ್ಬ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಇರುತ್ತದೆ ಎಂದ ವಿಜಯ್‍ ರಾಘವೇಂದ್ರ, ‘ನನಗೂ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ಈ ಚಿತ್ರದಲ್ಲಿ ಒಂದು ಹಾಡು ಕೂಡ ಹಾಡಿದ್ದೇನೆ’ ಎಂದರು.

‘ಸ್ವಪ್ನ ಮಂಟಪ’ ಚಿತ್ರಕ್ಕೆ ಶಮಿತಾ ಮಲ್ನಾಡ್‍ ಸಂಗೀತ ಮತ್ತು ನಾಗರಾಜ್‍ ಆದವಾನಿ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ರಜನಿ, ರಾಜಪ್ಪ ದಳವಾಯಿ, ಮೈಸೂರು ಮಂಜುಳ, ಶಿವಲಿಂಗ ಪ್ರಸಾದ್, ಸುಂದರ್‍ ರಾಜ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

6 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

6 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

6 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

6 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

6 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

6 hours ago