ಮನರಂಜನೆ

ಸಂದೇಶ್‍ ನಾಗರಾಜ್‍ 80; ಮೈಸೂರಿನಲ್ಲಿ ಆ.31ರಂದು ಬೃಹತ್‍ ಕಾರ್ಯಕ್ರಮ

ಕನ್ನಡ ಚಿತ್ರರಂಗಕ್ಕೆ ‘ಮಣ್ಣಿನ ದೋಣಿ’, ‘ಮುಸುಕು’ ‘ಮೊಮ್ಮಗ’, ‘ಮೇಘ ಬಂತು ಮೇಘ’, ‘ಸಿಂಗಾರೆವ್ವ’, ‘ಚಂದ್ರೋದಯ’, ‘ಗೌಡ್ರು’, ‘ಪ್ರಿನ್ಸ್’, ‘ಐರಾವತ’, ‘ಘೋಸ್ಟ್’ ಮುಂತಾದ ಚಿತ್ರಗಳನ್ನು ಹಲವು ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ, ಮಾಜಿ ಎಂ.ಎಲ್.ಸಿ ಸಂದೇಶ್ ನಾಗರಾಜ್ ಈಗ 80ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಆಗಸ್ಟ್ 16, ಸಂದೇಶ ನಾಗರಾಜ್ ಅವರು 79 ಪೂರೈಸುತ್ತಿದ್ದು, 80ನೇ ವಸಂತಕ್ಕೆ ಕಾಲಿಡಲಿದ್ದಾರೆ. ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವರ ಕುಟುಂಬ ಮುಂದಾಗಿದೆ. ಆಗಸ್ಟ್ 31ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ದೊಡ್ಡಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಟರಾದ ಶಿವರಾಜಕುಮಾರ್, ಸುದೀಪ್ ಸೇರಿದಂತೆ ಚಿತ್ರರಂಗದ ಹಲವಾರು ಕಲಾವಿದರು, ತಂತ್ರಜ್ಞರು ಹಾಗೂ ರಾಜಕೀಯ ಮುಖಂಡರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಆಗಸ್ಟ್.31ರಂದು ಮುಂಜಾನೆ 11 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಅವರಿಂದ ಮನರಂಜನಾ ಕಾರ್ಯಕ್ರಮ ಇರಲಿದೆ. ಇದೇ ಸಂದರ್ಭದಲ್ಲಿ ಸಂದೇಶ್‍ ನಾಗರಾಜ್‍ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗುತ್ತದೆ. ಅಂದು ಸುಮಾರು 50,000 ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ರಮದ ಕುರಿತು ಮಾತನಾಡುವ ನಾಗರಾಜ್‍ ಅವರ ಮಗ ಸಂದೇಶ್‍, ‘ಸಂದೇಶ ಕಂಬೈನ್ಸ್ ಹಾಗೂ ಸಂದೇಶ್ ಪ್ರೊಡಕ್ಷನ್ಸ್ ಮೂಲಕ ನಮ್ಮ ತಂದೆ ಹಲವಾರು ಯಶಸ್ವಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈಗ ನಾನು ಒಂದಿಷ್ಟು ಸಿನಿಮಾ ನಿರ್ಮಿಸುತ್ತಿದ್ದು, ಕಳೆದ 30 ವರ್ಷಗಳಲ್ಲಿ 34 ಸಿನಿಮಾ ನಿರ್ಮಿಸಲಾಗಿದೆ. ‘ಮಣ್ಣಿನ ದೋಣಿ’ ಚಿತ್ರದಿಂದ ಶುರುವಾದ ನಮ್ಮ ಸಿನಿಮಾ ಜರ್ನಿ ಈಗಲೂ ಮುಂದುವರೆದಿದೆ. ಚಿತ್ರರಂಗವಲ್ಲದೆ, ರಾಜಕೀಯ, ಉದ್ಯಮದಲ್ಲೂ ಯಶಸ್ಸಿನ ಮೆಟ್ಟಿಲು ಏರಿದ್ದಾರೆ’ ಎಂದು ಹೇಳಿದರು.

ಸಂದೇಶ್ ನಾಗರಾಜ್ ಅವರ ಮಗಳು ಬೃಂದಾ ಮಾತನಾಡಿ, ‘ಆಗಸ್ಟ್ 16 ಅವರ ಹುಟ್ಟುಹಬ್ಬ. ಅಂದು ನಾವೆಲ್ಲಾ ಫ್ಯಾಮಿಲಿ ಸೇರಿ ಆಚರಣೆ ಮಾಡುತ್ತೇವೆ. ಅಂದು ಪೂಜೆ, ಹೋಮ ಇರುವುದರಿಂದ ಆಗಸ್ಟ್ 31ರಂದು ಸಾರ್ವಜನಿಕವಾಗಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ’ ಎಂದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

9 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

12 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

12 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

16 hours ago