ಮನರಂಜನೆ

ಮನಸ್ಸಿನ ಅಂಧಕಾರವನ್ನು ಅನ್ವೇಷಿಸುವ ‘ಗ್ರೀನ್’ ಸದ್ಯದಲ್ಲೇ ತೆರೆಗೆ

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಕಲಾಜಿಕಲ್‍ ಥ್ರಿಲ್ಲರ್‍ ಚಿತ್ರಗಳು ಹೆಚ್ಚಾಗಿವೆ. ಮನಸ್ಸಿನ ವಿವಿಧ ಮುಖಗಳನ್ನು ಪರಿಚಯಿಸುವ ಚಿತ್ರಗಳು ಹೆಚ್ಚು ಹೆಚ್ಚು ಬಿಡುಗಡೆಯಾಗುತ್ತಿವೆ. ಈ ಸಾಲಿಗೆ ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಸಹ ಒಂದು.

ಈಗಾಗಲೇ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜೊತೆಗೆ ಪ್ರಶಂಸೆಯನ್ನು ಗಳಿಸಿರುವ ಹಾಗೂ ಸೈಕಲಾಜಿಕಲ್ ಮೈಂಡ್ ಬೆಂಡಿಂಗ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಆರ್.ಜೆ. ವಿಕ್ಕಿ, ವಿಶ್ವನಾಥ್ ಮಾಂಡಲಿಕ, ಶಿವ ಮಂಜು ಮುಂತಾದವರು ನಟಿಸಿದ್ದಾರೆ.

‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರವಾಗಿದ್ದು, ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ನಾಯಕನ ಕಥೆ ಹೇಳುತ್ತದೆ. ಆ ರಾಕ್ಷಸ ಕ್ರಮೇಣ ಮನಸ್ಸುನ್ನು ನಿಯಂತ್ರಣವನ್ನು ತೆಗೆದುಕೊಳ್ಳುತ್ತಿದ್ದಂತೆ, ನಾಯಕ ಭಯ ಮತ್ತು ಗೊಂದಲದ ವ್ಯೂಹದಲ್ಲಿ ಸಿಲುಕುತ್ತಾನೆ. ಈ ಆಂತರಿಕ ಹೋರಾಟದ ನಡುವೆ, ಚಿತ್ರದ ಕಥಾನಾಯಕನು ತಾನು ನಿಜವಾಗಿಯೂ ಯಾರು ಎಂಬುದನ್ನು ಹುಡುಕಲು ಪ್ರಯತ್ನಿಸುತ್ತಾನೆ. ತನ್ನೊಳಗಿನ ರಾಕ್ಷಸನು ತನ್ನ ಇಡೀ ಜೀವನವನ್ನೇ ಸಂಪೂರ್ಣವಾಗಿ ನುಂಗುವ ಮೊದಲು ನೆರವು ಹುಡುಕುವ ಮಹತ್ವವನ್ನು ಚಿತ್ರವು ಒತ್ತಿಹೇಳುತ್ತದೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರಾಜ್‍ ವಿಜಯ್‍, ‘ನಮ್ಮ ಕರಾಳ ಆಲೋಚನೆಗಳನ್ನು ಎದುರಿಸುವ ಮತ್ತು ಅವು ಮೇಲುಗೈ ಸಾಧಿಸುವ ಮೊದಲು ಸಹಾಯವನ್ನು ಪಡೆಯುವ ಮಹತ್ವವನ್ನು ನಾನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅನುಭವಿಸುವ ಆಂತರಿಕ ಹೋರಾಟಗಳು ಮತ್ತು ಅದನ್ನು ಜಯಿಸಲು ಬೇಕಾದ ಧೈರ್ಯದ ಮಹತ್ವವನ್ನು ಒತ್ತಿಹೇಳುತ್ತದೆ’ ಎನ್ನುತ್ತಾರೆ.

‘ಗ್ರೀನ್‍’ ಚಿತ್ರಕ್ಕೆ ಕೆ‌‌. ಮಧುಸೂದನ್ ಛಾಯಾಗ್ರಹಣ ಹಾಗೂ ಶಕ್ತಿ ಸ್ಯಾಕ್ ಅವರ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ ತನ್ನ ತಪ್ಪು ಮರೆಮಾಚಲು ಕೈ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…

21 mins ago

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಇನ್ನಿಲ್ಲ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…

34 mins ago

ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌

ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…

48 mins ago

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು…

2 hours ago

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

2 hours ago