Mysore
16
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಗುರುನಂದನ್‍ ಈಗ ‘ಮಿಸ್ಟರ್ ಜಾಕ್‍’; ಹುಟ್ಟುಹಬ್ಬಕ್ಕೆ ಟೀಸರ್ ಬಿಡುಗಡೆ

ಗುರುನಂದನ್‍ ಅಭಿನಯದ ಹೊಸ ಚಿತ್ರವೊಂದು ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿದ್ದು ನೆನಪಿರಬಹುದು. ಈ ಚಿತ್ರವನ್ನು ಅವರು ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಅಶ್ವಿನಿ ಪುನೀತ್‍ ರಾಜಕುಮಾರ್ ಚಾಲನೆ ನೀಡಿದ್ದರು. ಇದೀಗ ಚಿತ್ರದ ಶೇ. 75ರಷ್ಟು ಭಾಗದ ಚಿತ್ರೀಕರಣ ಮುಗಿದಿದ್ದು, ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲಾಗಿದೆ.

ಈ ಚಿತ್ರಕ್ಕೆ ‘ಮಿಸ್ಟರ್‍ ಜಾಕ್‍’ ಎಂಬ ಹೆಸರನ್ನು ಇಡಲಾಗಿದೆ. ಇತ್ತೀಚೆಗೆ ಗುರುನಂದನ್‍ ಹುಟ್ಟುಹಬ್ಬವ್ನು ಆಚರಿಸಿಕೊಂಡಿದ್ದು, ಅವರಿಗೆ ಶುಭ ಕೋರುವ ಶೀರ್ಷಿಕೆ ಟೀಸರ್‍ ಬಬಡುಗಡೆ ಮಾಡಲಾಗಿದೆ. ಜೊತೆಗೆ ಕೇಕ್‍ ಕತ್ತರಿಸುವ ಮೂಲಕ ಗುರುನಂದನ್‍ ಹುಟ್ಟುಹಬ್ಬವನ್ನೂ ಆಚರಿಸಲಾಗಿದೆ.

‘ಮಿಸ್ಟರ್‍ ಜಾಕ್‍’ ಚಿತ್ರವನ್ನು ಮಂಡಿಮನೆ ಟಾಕೀಸ್‍ ಬ್ಯಾನರ್‍ ಅಡಿ ಗುರುನಂದನ್‍ ಮತ್ತು ಸ್ನೇಹಿತರು ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಸುಮಂತ್‍ ಗೌಡ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರದೇಶನ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಸುಮಂತ್‍ ಗೌಡ ‘ಇಲ್ಲಿ ನಾಯಕನ ಹೆಸರು ಜಾನಕಿರಾಮ್‍. ಸಾಮಾನ್ಯವಾಗಿ stand-up comedianಗಳು ತಮ್ಮ ಹೆಸರುಗಳನ್ನು ಚಿಕ್ಕದಾಗಿ ಇಟ್ಟುಕೊಳ್ಳುತ್ತಾರೆ. ಹಾಗಾಗಿ, ನಾಯಕ ಇಲ್ಲಿ ತನ್ನನ್ನು ತಾನು ‘ಮಿಸ್ಟರ್ ಜ್ಯಾಕ್‍’ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುತ್ತಿರುತ್ತಾನೆ. ಇದೊಂದು ರೊಮ್ಯಾಂಟಿಕ್‍ ಕಾಮಿಡಿ ಮತ್ತು ಫ್ಯಾಮಿಲಿ ಡ್ರಾಮಾ. ಗುರುನಂದನ್‍ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನವನ್ನು ಚಿತ್ರದಲ್ಲಿ ಮಾಡುತ್ತಿದ್ದೇವೆ’ ಎಂದರು.

ಚಿತ್ರದ ಕುರಿತು ಮಾತನಾಡುವ ಗುರುನಂದನ್‍, ’ ಹಾಸ್ಯ ಮಾಡುವವರ ಹಿಂದಿನ ಕಥೆ ಇದು. ಇಲ್ಲಿ ನಾಯಕ ಒಬ್ಬ stand-up comedian ಆಗಿ ಕೆಲಸ ಮಾಡುತ್ತಿರುತ್ತಾನೆ. ಅವನ ಹಿಂದಿನ ನೋವನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮಲ್ಲಿ ಏನೇ ನೋವಿದ್ದರೂ, ಅದನ್ನು ಹೊರಗೆ ತೋರಿಸದೇ, ಎಲ್ಲರನ್ನೂ ನಗಿಸುವುದು, ದೊಡ್ಡ ಸವಾಲಿನ ಕೆಲಸ. ಅದನ್ನು ಈ ಚಿತ್ರದಲ್ಲಿ ಮಾಡುವ ಪ್ರಯತ್ನ ಮಾಡಿದ್ದೇನೆ’ ಎಂದರು ಗುರುನಂದನ್‍.

‘ಮಿಸ್ಟರ್ ಜಾಕ್’ ಚಿತ್ರದಲ್ಲಿ ಗುರುನಂದನ್‍ಗೆ ‘ಹರಿಕಥೆ ಅಲ್ಲ ಗಿರಿಕಥೆ’ ಖ್ಯಾತಿಯ ತೇಜಸ್ವಿನಿ ಪೂಣಚ್ಛ ನಟಿಸುತ್ತಿದ್ದಾರೆ. ಮಿಕ್ಕಂತೆ ಮಿತ್ರ, ಧರ್ಮಣ್ಣ ಕಡೂರು, ಗೋಪಾಲಕೃಷ್ಣ ದೇಶಪಾಂಡೆ, ಗಿರಿ, ಸುಷ್ಮಿತಾ ಮುಂತಾದವರು ನಟಿಸುತ್ತಿದ್ದಾರೆ. ಕಾರ್ತಿಕ್‍ ಪತ್ಥಾರ್‍ ಮುಂತಾದ ಜನಪ್ರಿಯ stand-up comedianಗಳು ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ಚಿತ್ರಕ್ಕೆ ಈಗಾಗಲೇ ಬೆಂಗಳೂರು ಸುತ್ತಮುತ್ತ ಶೇ. 75ರಷ್ಟು ಚಿತ್ರೀಕರಣ ಮುಗಿಸಿದ್ದೇವೆ. ಕೊನೆಯ ಹಂತದ ಚಿತ್ರೀಕರಣ ಜನವರಿ ಮೊದಲ ವಾರದಿಂದ ಶುರುವಾಗಲಿದೆ. ಚಿತ್ರಕ್ಕೆ ಕಿರಣ್ ರವೀಂದ್ರನಾಥ್‍ ಸಂಗೀತ ಸಂಯೋಜಿಸುತ್ತಿದ್ದು, ಶಿವಸೇನ ಛಾಯಾಗ್ರಹಣವಿದೆ.

Tags:
error: Content is protected !!