ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು ಆ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.
ಚಿತ್ರಕ್ಕೆ ‘ಎದ್ದೇಳು ಮಂಜುನಾಥ 2’ ಎಂಬ ಹೆಸರನ್ನು ಇಡಲಾಗಿದ್ದು, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಥವಾ ಇದು ಆ ಚಿತ್ರದ ಮುಂದುವರೆದ ಭಾಗವಲ್ಲ. ಬದಲಿಗೆ ಇನ್ನೊಂದು ಆವೃತ್ತಿ ಎನ್ನಬಹುದು. ಫೆಬ್ರವರಿ 21ರಂದು ಚಿತ್ರ ಬಿಡುಗಡೆಯಾಗುತತಿದ್ದು, ಈ ಚಿತ್ರದಲ್ಲಿ ಗುರುಪ್ರಸಾದ್ ಜೊತೆಗೆ ರಚಿತಾ ಮಹಾಲಕ್ಷ್ಮೀ, ಶರತ್ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ.
ಇತ್ತೀಚೆಗೆ, ‘ಎದ್ದೇಳು ಮಂಜುನಾಥ 2’ ಚಿತ್ರದ ‘ಕಿತ್ತೋದ ಪ್ರೇಮ …’ ಎಂಬ ಹಾಡು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಗುರುಪ್ರಸಾದ್ ಸಾಹಿತ್ಯ ರಚಿಸಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ನವೀನ್ ಸಜ್ಜು ಹಾಡಿದ್ದಾರೆ. ಇನ್ನು, ಈ ಮೂವರೂ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಹಾಡು ಬಿಡುಗಡೆ ನಂತರ ಮಾತನಾಡಿದ ಶರತ್ ಲೋಹಿತಾಶ್ವ, ‘ನಾನು ಗುರುಪ್ರಸಾದ್ ಅವರನ್ನು ಅಭಿಮಾನಿಯಾಗಿ ನೋಡಿದ್ದೆ. ಅವರ ಚಿತ್ರಗಳಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿರಲಿಲ್ಲ. ಪ್ರತಿಯೊಬ್ಬ ಕಲಾವಿದರಿಗೂ ಒಬ್ಬ ಒಳ್ಳೆಯ ನಿರ್ದೇಶಕರ ಜೊತೆ ಕೆಲಸ ಮಾಡಬೇಕು ಎಂಬ ಆಸೆ ಇರುತ್ತದೆ. ಆ ಆಸೆ ನನಗೂ ಇತ್ತು. ಆ ಆಸೆ ಗುರುಪ್ರಸಾದ್ ಅವರ ಕೊನೆಯ ಚಿತ್ರದಲ್ಲಿ ಈಡೇರಿದೆ’ ಎಂದರು.
ನಾಯಕಿ ರಚಿತಾ ಮಹಾಲಕ್ಷ್ಮಿ ಮಾತನಾಡಿ, ‘ನಾನು ‘ರಂಗನಾಯಕ’ ಚಿತ್ರಕ್ಕೂ ಮೊದಲೇ ಈ ಚಿತ್ರದಲ್ಲಿ ನಟಿಸಿದ್ದೆ. 2020ನಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಿದ್ದೆವು. ಗುರುಪ್ರಸಾದ್ ಅವರ ನಿರ್ದೇಶನದಲ್ಲಿ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ’ ಎಂದರು.
‘ಎದ್ದೇಳು ಮಂಜುನಾಥ 2’ ಚಿತ್ರವನ್ನು ರಾಮ್ ಮೂವೀಸ್, ಗುರುಪ್ರಸಾದ್ inc ಹಾಗೂ ಫ್ರೆಂಡ್ಸ್ ಫೋರ್ಮ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರದಿಂದ ಬರುವ ಲಾಭದ ಶೇ. 50ರಷ್ಟು ಭಾಗವನ್ನು ಗುರುಪ್ರಸಾದ್ ಅವರ ಮಗಳಾದ ನಗು ಶರ್ಮಾ ಭವಿಷ್ಯಕ್ಕೆ ಮೀಸಲಿಡಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ…