ಮನರಂಜನೆ

ಗುರುಪ್ರಸಾದ್ ಕೊನೆಯ ಸಿನಿಮಾ ಬಿಡುಗಡೆಗೆ ರೆಡಿ; ಫೆ. 21ಕ್ಕೆ ತೆರೆಗೆ

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್‍, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು ಆ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಚಿತ್ರಕ್ಕೆ ‘ಎದ್ದೇಳು ಮಂಜುನಾಥ 2’ ಎಂಬ ಹೆಸರನ್ನು ಇಡಲಾಗಿದ್ದು, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಥವಾ ಇದು ಆ ಚಿತ್ರದ ಮುಂದುವರೆದ ಭಾಗವಲ್ಲ. ಬದಲಿಗೆ ಇನ್ನೊಂದು ಆವೃತ್ತಿ ಎನ್ನಬಹುದು. ಫೆಬ್ರವರಿ 21ರಂದು ಚಿತ್ರ ಬಿಡುಗಡೆಯಾಗುತತಿದ್ದು, ಈ ಚಿತ್ರದಲ್ಲಿ ಗುರುಪ್ರಸಾದ್‍ ಜೊತೆಗೆ ರಚಿತಾ ಮಹಾಲಕ್ಷ್ಮೀ, ಶರತ್‍ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ.

ಇತ್ತೀಚೆಗೆ, ‘ಎದ್ದೇಳು ಮಂಜುನಾಥ 2’ ಚಿತ್ರದ ‘ಕಿತ್ತೋದ ಪ್ರೇಮ …’ ಎಂಬ ಹಾಡು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಗುರುಪ್ರಸಾದ್‍ ಸಾಹಿತ್ಯ ರಚಿಸಿದ್ದು, ಅನೂಪ್‍ ಸೀಳಿನ್‍ ಸಂಗೀತ ಸಂಯೋಜಿಸಿದ್ದಾರೆ. ನವೀನ್‍ ಸಜ್ಜು ಹಾಡಿದ್ದಾರೆ. ಇನ್ನು, ಈ ಮೂವರೂ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಹಾಡು ಬಿಡುಗಡೆ ನಂತರ ಮಾತನಾಡಿದ ಶರತ್ ಲೋಹಿತಾಶ್ವ, ‘ನಾನು ಗುರುಪ್ರಸಾದ್‍ ಅವರನ್ನು ಅಭಿಮಾನಿಯಾಗಿ ನೋಡಿದ್ದೆ. ಅವರ ಚಿತ್ರಗಳಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿರಲಿಲ್ಲ. ಪ್ರತಿಯೊಬ್ಬ ಕಲಾವಿದರಿಗೂ ಒಬ್ಬ ಒಳ್ಳೆಯ ನಿರ್ದೇಶಕರ ಜೊತೆ ಕೆಲಸ‌ ಮಾಡಬೇಕು ಎಂಬ ಆಸೆ ಇರುತ್ತದೆ. ಆ ಆಸೆ ನನಗೂ ಇತ್ತು. ಆ ಆಸೆ ಗುರುಪ್ರಸಾದ್ ಅವರ ಕೊನೆಯ ಚಿತ್ರದಲ್ಲಿ ಈಡೇರಿದೆ’ ಎಂದರು.

ನಾಯಕಿ ರಚಿತಾ ಮಹಾಲಕ್ಷ್ಮಿ ಮಾತನಾಡಿ, ‘ನಾನು ‘ರಂಗನಾಯಕ’ ಚಿತ್ರಕ್ಕೂ ಮೊದಲೇ ಈ ಚಿತ್ರದಲ್ಲಿ ನಟಿಸಿದ್ದೆ. 2020ನಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಿದ್ದೆವು. ಗುರುಪ್ರಸಾದ್ ಅವರ ನಿರ್ದೇಶನದಲ್ಲಿ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ’ ಎಂದರು.

‘ಎದ್ದೇಳು ಮಂಜುನಾಥ 2’ ಚಿತ್ರವನ್ನು ರಾಮ್ ಮೂವೀಸ್, ಗುರುಪ್ರಸಾದ್ inc ಹಾಗೂ ಫ್ರೆಂಡ್ಸ್ ಫೋರ್ಮ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರದಿಂದ ಬರುವ ಲಾಭದ ಶೇ. 50ರಷ್ಟು ಭಾಗವನ್ನು ಗುರುಪ್ರಸಾದ್ ಅವರ ಮಗಳಾದ ನಗು ಶರ್ಮಾ ಭವಿಷ್ಯಕ್ಕೆ ಮೀಸಲಿಡಲಾಗುವುದು.

ಆಂದೋಲನ ಡೆಸ್ಕ್

Recent Posts

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

7 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

13 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

13 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

18 hours ago