ಮನರಂಜನೆ

ಓಂಪ್ರಕಾಶ್ ರಾವ್ ನಿರ್ದೇಶನದ ಎರಡು ಚಿತ್ರಗಳಿಗೆ ಹಂಸಲೇಖ ಸಂಗೀತ

ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಮತ್ತೊಮ್ಮೆ ಸಕ್ರಿಯರಾಗಿದ್ದಾರೆ. ಕಳೆದ ವಾರವಷ್ಟೇ ಅವರ ನಿರ್ದೇಶನದ ಮತ್ತು ಸಂಗೀತ ನಿರ್ದೇಶನದ ‘ಓಕೆ’ ಎಂಬ ಚಿತ್ರವು ಸೆಟ್ಟೇರಿತ್ತು. ಇದೀಗ ಹಂಸಲೇಖ ಇನ್ನೂ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸುವುದಕ್ಕೆ ಅಣಿಯಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಓಂಪ್ರಕಾಶ್ ರಾವ್‍ ಮತ್ತು ಹಂಸಲೇಖ ಅವರದ್ದು ಜನಪ್ರಿಯ ಜೋಡಿ. ಓಂಪ್ರಕಾಶ್ ರಾವ್‍ ನಿರ್ದೇಶನದ ‘ಲಾಕಪ್ ಡೆತ್’, ‘ಸಿಂಹದ ಮರಿ’, ‘AK 47’, ‘ಪಾಳೆಗಾರ’ ಮುಂತಾದ ಚಿತ್ರಗಳಿಗೆ ಹಂಸಲೇಖ ಸಂಗೀತ ಸಂಯೋಜಿಸಿದ್ದರು. ಇದೀಗ ‘ಫೀನಿಕ್ಸ್’ ಹಾಗೂ ‘ಗೆರಿಲ್ಲಾ ವಾರ್‌’ ಚಿತ್ರಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಓಂಪ್ರಕಾಶ್ ರಾವ್ ನಿರ್ದೇಶನದ 49 ಹಾಗೂ 50ನೇ ಚಿತ್ರಗಳಾಗಿದೆ.

ಈ ಪೈಕಿ ಚಿತ್ರೀಕರಣ ಮುಕ್ತಾಯ ಹಂತದಲ್ಲಿರುವ ‘ಫೀನಿಕ್ಸ್’ ಚಿತ್ರವನ್ನು ಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಿಸುತ್ತಿದ್ದಾರೆ. ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಎಸ್ತರ್ ನರೋನ್ಹಾ, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ.

‘ಗೆರಿಲ್ಲಾ ವಾರ್’ ಚಿತ್ರವನ್ನು ಎಂ.ಆರ್. ಟಾಕೀಸ್ ಲಾಂಛನದಲ್ಲಿ ನಯನ ಗೌಡ ನಿರ್ಮಿಸುತ್ತಿದ್ದು, ಮಂಡ್ಯ ಲೋಕಿ ನಾಯಕನಾಗಿ ಹಾಗೂ ನಿಮಿಕ ರತ್ನಾಕರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದು ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರವಾಗಿದ್ದು, ಆಗಸ್ಟ್ ನಲ್ಲಿ ಆರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

17 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

17 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

18 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

18 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

18 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

19 hours ago