ಮನರಂಜನೆ

ಕನ್ನಡದ DNA ಇದ್ದರೆ ಜನ ಕನ್ನಡ ಸಿನಿಮಾ ನೋಡ್ತಾರೆ: ಹಂಸಲೇಖ

‘ಮಣ್ಣಿನ ಗುಣವಿರುವ ಕಥೆಗಳು, ಕಥೆಗಾರರು ನಮ್ಮ ಸಿನಿಮಾ ಬೇಕು. ಅಂತಹ ಸಿನಿಮಾಗಳು ಬಂದರೆ ಸಾಮಾನ್ಯ ಪ್ರೇಕ್ಷಕರು ಬರುತ್ತಾರೆ. ಕಥೆಗಳಲ್ಲಿ ಕನ್ನಡದ ಡಿಎನ್‌ಎ ಇದ್ರೆ ಜನ ಖಂಡಿತಾ ಚಿತ್ರ ನೋಡುತ್ತಾರೆ. ಈ ಚಿತ್ರದ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಆಂದೋಲನ ಮಾಡುತ್ತಿದ್ದೇವೆ’ ಎಂದು ಹಿರಿಯ ಚಿತ್ರಸಾಹಿತಿ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ಅವರು ಹೇಳಿದ್ದು ತಮ್ಮ ನಿರ್ದೇಶನದ ಮೊದಲ ಚಿತ್ರ ‘ಓಕೆ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ. ಈ ಚಿತ್ರವು ಸೋಮವಾರ ಸೆಟ್ಟೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಸಂಜೆ ಚಿತ್ರದ ಪತ್ರಿಕಾಗೋಷ್ಠಿ ನಡೆದಿದ್ದು, ಈ ಸಂದರ್ಭದಲ್ಲಿ ರವಿಚಂದ್ರನ್‍, ಹಿರಿಯ ನಿರ್ಮಾಪಕ ಬಿ.ಎನ್. ಗಂಗಾಧರ್ ಮತ್ತು ಲತಾ ಹಂಸಲೇಖ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಂಸಲೇಖ ಅವರು ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು.

ಈ ಚಿತ್ರಕ್ಕೆ ‘ಓಕೆ’ ಎಂಬ ಹೆಸರಿಡಲಾಗಿದ್ದು, ಅದೀಬ್‍ ಅಖ್ತರ್‍ ಅವರ ‘ಪಂಜರ’ ಕಥೆಯನ್ನು ಆಧರಿಸಿದೆ. ‘ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರುವಂತಹ ಚಿತ್ರ ಇದು. ಕಿಶೋರ್‍ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಮಿಕ್ಕಂತೆ ದೊಡ್ಡ ತಾರಾಬಳಗವಿದೆ. ಮುಂದಿನ ದಿನಗಳಲ್ಲಿ ಬೇರೆ ವಿಷಯಗಳನ್ನು ಹಂಚಿಕೊಳ್ಳುತ್ತೇನೆ’ ಎಂದರು.

ವೈದ್ಯಕೀಯ ವಲಯಕ್ಕೆ ಎಚ್ಚರಿಕೆ ನೀಡುವಂತಹ ಚಿತ್ರ ಇದು ಎನ್‍ನುವ ಹಂಸಲೇಖ, ‘ಹೆಣ್ಣು ಭ್ರೂಣ ಹತ್ಯೆ ಎನ್ನುವುದು ದೊಡ್ಡ ಸಾಮಾಜಿಕ ಪಿಡುಗಾಗಿದೆ. ಇದಕ್ಕೆ ಹಲವು ಕಾರಣಗಳಿವೆ. ಈ ಚಿತ್ರದ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ವೈದ್ಯಕೀಯ ವಲಯಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ಚಿತ್ರದಲ್ಲಿ ಹೊಸ ತರಹದ ನಿರೂಪಣೆ ಇರುತ್ತದೆ. ಒಳ್ಳೆಯ ಸಂಗೀತ, ತಾರಾಗಣವಿರುತ್ತದೆ’ ಎಂದರು.

‘ಓಕೆ’ ಚಿತ್ರವನ್ನು ನಾಗೇಶ್ ವಾಷ್ಟರ್ ಮತ್ತು ಸೂರ್ಯಪ್ರಕಾಶ್, ಆಕಾಂಕ್ಷ ಪ್ರೊಡಕ್ಷನ್ ಮತ್ತು ಐದನಿ ಎಂಟರ್ಟೈನ್ ಮೆಂಟ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

4 mins ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

45 mins ago

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

4 hours ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

4 hours ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

4 hours ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

4 hours ago