hamsalekha statement on kannada peoples and kannada film
‘ಮಣ್ಣಿನ ಗುಣವಿರುವ ಕಥೆಗಳು, ಕಥೆಗಾರರು ನಮ್ಮ ಸಿನಿಮಾ ಬೇಕು. ಅಂತಹ ಸಿನಿಮಾಗಳು ಬಂದರೆ ಸಾಮಾನ್ಯ ಪ್ರೇಕ್ಷಕರು ಬರುತ್ತಾರೆ. ಕಥೆಗಳಲ್ಲಿ ಕನ್ನಡದ ಡಿಎನ್‌ಎ ಇದ್ರೆ ಜನ ಖಂಡಿತಾ ಚಿತ್ರ ನೋಡುತ್ತಾರೆ. ಈ ಚಿತ್ರದ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಆಂದೋಲನ ಮಾಡುತ್ತಿದ್ದೇವೆ’ ಎಂದು ಹಿರಿಯ ಚಿತ್ರಸಾಹಿತಿ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.
ಅವರು ಹೇಳಿದ್ದು ತಮ್ಮ ನಿರ್ದೇಶನದ ಮೊದಲ ಚಿತ್ರ ‘ಓಕೆ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ. ಈ ಚಿತ್ರವು ಸೋಮವಾರ ಸೆಟ್ಟೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಸಂಜೆ ಚಿತ್ರದ ಪತ್ರಿಕಾಗೋಷ್ಠಿ ನಡೆದಿದ್ದು, ಈ ಸಂದರ್ಭದಲ್ಲಿ ರವಿಚಂದ್ರನ್, ಹಿರಿಯ ನಿರ್ಮಾಪಕ ಬಿ.ಎನ್. ಗಂಗಾಧರ್ ಮತ್ತು ಲತಾ ಹಂಸಲೇಖ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಂಸಲೇಖ ಅವರು ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು.
ಈ ಚಿತ್ರಕ್ಕೆ ‘ಓಕೆ’ ಎಂಬ ಹೆಸರಿಡಲಾಗಿದ್ದು, ಅದೀಬ್ ಅಖ್ತರ್ ಅವರ ‘ಪಂಜರ’ ಕಥೆಯನ್ನು ಆಧರಿಸಿದೆ. ‘ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರುವಂತಹ ಚಿತ್ರ ಇದು. ಕಿಶೋರ್ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಮಿಕ್ಕಂತೆ ದೊಡ್ಡ ತಾರಾಬಳಗವಿದೆ. ಮುಂದಿನ ದಿನಗಳಲ್ಲಿ ಬೇರೆ ವಿಷಯಗಳನ್ನು ಹಂಚಿಕೊಳ್ಳುತ್ತೇನೆ’ ಎಂದರು.
ವೈದ್ಯಕೀಯ ವಲಯಕ್ಕೆ ಎಚ್ಚರಿಕೆ ನೀಡುವಂತಹ ಚಿತ್ರ ಇದು ಎನ್‍ನುವ ಹಂಸಲೇಖ, ‘ಹೆಣ್ಣು ಭ್ರೂಣ ಹತ್ಯೆ ಎನ್ನುವುದು ದೊಡ್ಡ ಸಾಮಾಜಿಕ ಪಿಡುಗಾಗಿದೆ. ಇದಕ್ಕೆ ಹಲವು ಕಾರಣಗಳಿವೆ. ಈ ಚಿತ್ರದ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ವೈದ್ಯಕೀಯ ವಲಯಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ಚಿತ್ರದಲ್ಲಿ ಹೊಸ ತರಹದ ನಿರೂಪಣೆ ಇರುತ್ತದೆ. ಒಳ್ಳೆಯ ಸಂಗೀತ, ತಾರಾಗಣವಿರುತ್ತದೆ’ ಎಂದರು.
‘ಓಕೆ’ ಚಿತ್ರವನ್ನು ನಾಗೇಶ್ ವಾಷ್ಟರ್ ಮತ್ತು ಸೂರ್ಯಪ್ರಕಾಶ್, ಆಕಾಂಕ್ಷ ಪ್ರೊಡಕ್ಷನ್ ಮತ್ತು ಐದನಿ ಎಂಟರ್ಟೈನ್ ಮೆಂಟ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣವಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…