Categories: ಮನರಂಜನೆ

ಹರಿ ಸಂತೋಷ್ ನಿರ್ದೇಶನದಲ್ಲಿ ʼಡಿಸ್ಕೋʼ ಮಾಡಲು ಹೊರಟ ವಿಕ್ಕಿ

ʼಕೆಂಡ ಸಂಪಿಗೆʼ ಖ್ಯಾತಿಯ ವಿಕ್ಕಿ ವರುಣ್ ಅಭಿನಯದಲ್ಲಿ ಕೆಲವು ವರ್ಷಗಳ ಹಿಂದೆ ʼಕಾಲೇಜ್ ಕುಮಾರʼ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ʼಅಲೆಮಾರಿʼ ಸಂತು. ಇದೀಗ ಅದೇ ಹರಿ ಸಂತೋಷ್ ಮತ್ತು ವಿಕ್ಕಿ ವರುಣ್ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದರೆ.

ಈ ಬಾರಿ ವಿಕ್ಕಿ ಅಭಿನಯದಲ್ಲಿ ಹರಿ ಸಂತೋಷ್, ʼಡಿಸ್ಕೋʼ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಜನವರಿಯಲ್ಲಿ ಈ ಚಿತ್ರದ ಮುಹೂರ್ತ ನಡೆಯಲಿದ್ದು, ಇತ್ತೀಚೆಗೆ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. . ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ನಾರಾಯಣ್ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಚಿತ್ರದ ಕುರಿತು ಮಾತನಾಡುವ ಹರಿ ಸಂತೋಷ್, ʼಇಲ್ಲಿ ನಾಯಕನ ಹೆಸರು ʼಡಿಸ್ಕೋʼ. ವಿಕ್ಕಿ ವರುಣ್ ಈ ಚಿತ್ರದ ನಾಯಕ. ಇದೊಂದು ಹಳ್ಳಿಯಲ್ಲಿ ನಡೆಯುವ ಕಥೆ. ೨೫ ವರ್ಷಗಲ ಹಿಂದೆ ಈ ತರಹದ ಜಾನರ್ನ ಸಿನಿಮಾ ಬಂದಿತ್ತು. ಅ ನಂತರ ಯಾರೂ ಈ ಕುರಿತು ಚಿತ್ರ ಮಾಡಿರಲಿಲ್ಲ, ೨೦೦೧ರಲ್ಲಿ ನಡೆದ ಒಂದು ನೈಜ ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದೇವೆ. ಇದೊಂದು ಮಾಮೂಲಿ ಚಿತ್ರವಲ್ಲ. ಬೇರೆ ರೀತಿಯ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡುತ್ತಿದ್ದೇವೆʼ ಎಂದರು.

ಇದು ವಿಕ್ಕಿ ನಾಯಕನಾಗಿ ನಟಿಸುತ್ತಿರುವ ನಾಲ್ಕನೇ ಚಿತ್ರ. ಈ ಚಿತ್ರಕ್ಕೆ ಅವರೇ ಕಥೆ ಬರೆದಿದ್ದಾರೆ. ತಮ್ಮ ಜೀವನದಲ್ಲಿ ನಡೆದ ಒಂದು ಘಟನೆಯನ್ನಾಧರಿಸಿ ಅವರು ಕಥೆ ಮಾಡಿದ್ದಾರಂತೆ. ʼಹಿಂದಿನ ಮೂರು ಚಿತ್ರಗಳೆ ಬೇರೆ ತರಹ.‌ ಇದೇ ಬೇರೆ ತರಹ. ನಾನು ನಿಜಜೀವನದಲ್ಲಿ ಹೇಗೆ ಇದ್ದೀನೋ, ಅದೇ ತರಹ ಪಾತ್ರ ಎನ್ನಬಹುದು. ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ಇದು ಹಳ್ಳಿಯಿಂದ ಸಿಟಿಗೆ ಬರುವ ಹುಡುಗನ ಕಥೆ ಅಲ್ಲ. ಹಳ್ಳಿಯನ್ನೇ ಸಿಟಿ‌ ಮಾಡಲು ಹೊರಟ ಹುಡುಗನ ಕಥೆ. ಹರಿ ಸಂತೋಷ್ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆʼ ಎಂದರು.

ಈ ಚಿತ್ರವನ್ನು ಕಲ್ಲೂರು ಸಿನಿಮಾಸ್ ಬ್ಯಾನರ್ ಅಡಿ ಪ್ರಶಾಂತ್ ಕಲ್ಲೂರ್ ನಿರ್ಮಿಸುತ್ತಿದ್ದಾರೆ. ಹರೀಶ್ ರೆಡ್ಡಿ ಸಹ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ. ಧ್ರುವ್ ಎಂಬ ಹೊಸ ಸಂಗೀತ ನಿರ್ದೇಶಕ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

ಭೂಮಿಕಾ

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

57 mins ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

1 hour ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

1 hour ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

1 hour ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

1 hour ago