ಮನರಂಜನೆ

ಹೀರೋ ಆದ ನವೀನ್ ಸಜ್ಜು; ‘ಲೋ ನವೀನ’ ಚಿತ್ರದ ‘ಕೋಣಾಣೆ’ ಹಾಡು ಬಿಡುಗಡೆ

ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ನವೀನ್‍ ಸಜ್ಜು ಅಭಿನಯದ ‘ಲೋ ನವೀನ’ ಎಂಬ ಚಿತ್ರ. ಕನ್ನಡ ಚಿತ್ರರಂಗದಲ್ಲಿ ಗಾಯಕರಾಗಿ ಗುರುತಿಸಿಕೊಂಡಿದ್ದ ನವೀನ್‍, ಈ ಚಿತ್ರದ ಮೂಲಕ ಹೀರೋ ಆಗಿದ್ದರು. ಈ ಚಿತ್ರವು ಇದೀಗ ಮುಕ್ತಾಯದ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ‘ಕೋಣಾಣೆ …’ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ.

ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್.ಡಿ. ಕೋಟೆಯ ಗ್ರಾಮೀಣ ಪ್ರತಿಭೆಗಳಾದ ಚಮ್ಮಮ್ಮ ಹಾಗೂ ಲಕ್ಷಮ್ಮ ಹಾಡಿದ್ದಾರೆ. ನವೀನ್ ಸಜ್ಜು ಸಹ ಗಾಯನನದಲ್ಲಿ ಜೊತೆಯಾಗಿದ್ದಾರೆ. ಬರೀ ಗಾಯನವಷ್ಟೇ ಅಲ್ಲ, ಹಾಡಿಗೆ ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತವನ್ನೂ ನವೀನ್‍ ಸಂಯೋಜಿಸಿದ್ದಾರೆ.

ನಂತರ ಮಾತನಾಡಿದ ನವೀನ್‍ ಸಜ್ಜು, ‘ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನನ್ನ ಪ್ರತಿಭೆ ಗುರುತಿಸಿದ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಹಾಗೂ ನಿರ್ದೇಶಕ ಪವನ್ ಕುಮಾರ್ ‘ಲೂಸಿಯಾ’ ಚಿತ್ರದಲ್ಲಿ ಹಾಡುವ ಅವಕಾಶ ಕೊಟ್ಟರು. ಅಲ್ಲಿಂದ ನನ್ನ ಜರ್ನಿ ಆರಂಭವಾಯಿತು. ಆನಂತರ ಸಾಕಷ್ಟು ಚಿತ್ರಗಳಲ್ಲಿ ಹಾಡಿದ್ದೇನೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನೋರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಅಮೇರಿಕಾಗೆ ಒಮ್ಮೆ ಹೋಗಿದ್ದಾಗ ಬೆನ್ ಚಿಕ್ಕಸ್ವಾಮಿ ಹಾಗೂ ಕೀರ್ತಿಸ್ವಾಮಿ ಅವರನ್ನು ಭೇಟಿ ಮಾಡಿದೆ. ಅವರ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ಅವರು ನಾವೇ ಚಿತ್ರಕ್ಕೆ ಬಂಡವಾಳ ಹೂಡುತ್ತೇವೆ ಎಂದರು. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ’ ಎಂದರು.

ಚಿತ್ರದ ಲೊಕೇಶನ್ ಹುಡುಕಾಟದ ಸಲುವಾಗಿ ಎಚ್.ಡಿ. ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ ಎಂದ ನವೀನ್, ‘ಅವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ, ಅವರಿಂದಲೇ ಈ ಹಾಡು ಹಾಡಿಸಿದ್ದೇನೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ’ ಎಂದರು ನವೀನ್ ಸಜ್ಜು.

ಈ ಚಿತ್ರವನ್ನು ಧನುರ್ದಾರಿ ಪವನ್‍ ನಿರ್ದೇಶಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ. ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಮತ್ತು ಕೀರ್ತಿ ಸ್ವಾಮಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ರಿಷಿಕೇಶ್ ಛಾಯಾಗ್ರಹಣವಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಹಾಡು ಬಿಡುಗಡೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 mins ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

20 mins ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

28 mins ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

38 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

55 mins ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…

1 hour ago