ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ದಂಡ ವಿಧಿಸಿದೆ.
ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಅನುಮತಿ ಇಲ್ಲದೇ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್‌ಗೆ 25 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ವಿಚಾರಣೆಯ ವೇಳೆ ರಕ್ಷಿತ್ ಶೆಟ್ಟಿ ಮತ್ತು ತಂಡ ಸಮರ್ಥನೆಯಾಗಿ ಅನೇಕ ವಾದಗಳನ್ನು ಮಂಡಿಸಿದೆ. ನ್ಯಾಯ ಎಲ್ಲಿದೆ ಹಾಡನ್ನು ಕೇವಲ 7 ಸೆಕೆಂಡ್, ಒಮ್ಮೆ ನಿನ್ನನ್ನು ಹಾಡನ್ನು 31 ಸೆಕೆಂಡ್ ಮಾತ್ರ ಬಳಕೆ ಮಾಡಲಾಗಿದ್ದು, ಇದು ಅತಿ ಕಡಿಮೆ ಅವಧಿ ಆಗಿರುವುದರಿಂದ ಹಕ್ಕುಸ್ವಾಮ್ಯ ಉಲ್ಲಂಘನೆ ಆಗುವುದಿಲ್ಲ ಎಂದು ವಾದಿಸಿತ್ತು.
ಈ ವಾದ ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಹಣಕಾಸಿನ ವಿಚಾರದಲ್ಲಿ ಕಾಪಿರೈಟ್ ಉಲ್ಲಂಘಿಸಿದ್ದಕ್ಕಾಗಿ 20 ಲಕ್ಷ ರೂ, ಕೋರ್ಟ್ ಆದೇಶ ಪಾಲನೆ ವಿಳಂಬಕ್ಕೆ 5 ಲಕ್ಷ ರೂ ಸೇರಿ ಒಟ್ಟು 25 ಲಕ್ಷ ರೂ ದಂಡ ವಿಧಿಸಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…