ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಪೋಸ್ಟ್ ಪ್ರೊಡಕ್ಷಷನ್ ಕೆಲಸಗಳು ಭರದಿಮದ ಸಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕೆ ಹಾಲಿವುಡ್‍ನ ಖ್ಯಾತ MARZ ಸಂಸ್ಥೆಯು ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ.
ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ‘45’ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿದ್ದವು. ಇದೀಗ ಚಿತ್ರಕ್ಕೆ VFX ಕೆಲಸ ಶುರುವಾಗಿದ್ದು, ಅದಕ್ಕಾಗಿ ಟೊರೊಂಟೋದ ಖ್ಯಾತ VFX ಸಂಸ್ಥೆಯಾದ MARZನ ಮೊರೆ ಹೋಗಿದ್ದಾರೆ ನಿರ್ದೇಶಕ ಅರ್ಜುನ್ ಜನ್ಯ.
ಹಾಲಿವುಡ್‍ನ 150 ಕ್ಕೂ ಅಧಿಕ ಚಿತ್ರಗಳಿಗೆ ಗ್ರಾಫಿಕ್ಸ್ ಕೆಲಸ ಮಾಡಿ ,ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಟೊರೊಂಟೊದ MARZ’ ಸಂಸ್ಥೆಯು ‘45’ ಚಿತ್ರದ VFX ಕೆಲಸ ಮಾಡುತ್ತಿದೆ. ಇದು ಈ ಸಂಸ್ಥೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ ಮಾಡುತ್ತಿರುವ ಭಾರತದ ಮೊದಲ ಚಿತ್ರ. ಈ ಸಂಸ್ಥೆಯ ರಾಫೆಲ್ ಹಾಗೂ ಜಸ್ಟಿನ್ ಅವರ ನೇತೃತ್ವದಲ್ಲಿ ಗ್ರಾಫಿಕ್ಸ್ ಕಾರ್ಯ ನಡೆಯುತ್ತಿದೆ. ಇತ್ತೀಚಿಗೆ ಈ ಚಿತ್ರದ ಗ್ರಾಫಿಕ್ಸ್ ಕೆಲಸದ ನಿಮಿತ್ತವಾಗಿ ಟೊರಾಂಟೋದ MARZ ಸಂಸ್ಥೆಗೆ ಅರ್ಜುನ್ ಜನ್ಯ ಭೇಟಿ ನೀಡಿದ್ದಾರೆ.
ಚಿತ್ರದ ಕುರಿತು ಮಾತನಾಡುವ ಅರ್ಜುನ್ ಜನ್ಯ, ‘ಈ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಈ ಮೂವರು ಬ್ರಹ್ಮ ವಿಷ್ಣು ಮಹೇಶ್ವರರಿದ್ದ ಹಾಗೆ. ರಮೇಶ್ ರೆಡ್ಡಿ ಈ ಮೂವರನ್ನು ಇಟ್ಟುಕೊಂಡು ಒಂದು ದೇವಸ್ಥಾನ ಕಟ್ಟಿಸಿದ್ದಾರೆ. ಸತ್ಯ ಹೆಗಡೆ ಈ ದೇವಸ್ಥಾನದ ಪ್ರಧಾನ ಅರ್ಚಕರು. ಇವರೆಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ’ ಎಂದು ಹೇಳಿದ್ದರು.
‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…