ಎಆರ್ಎಂ ಟೊವಿನೋ ಥಾಮಸ್ ಅವರ 50ನೇ ಚಿತ್ರ
ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್. ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್ಎಂ” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.
ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ
ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಎಆರ್ಎಂ ಭರ್ಜರಿ ಆ್ಯಕ್ಷನ್ ಸೀನ್ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್ ಕೊಟ್ಟಿದೆ.
ಟೊವಿನೋ ಥಾಮಸ್ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್ಎಂ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…