ಮಲಯಾಳಂನ ಜನಪ್ರಿಯ ನಟ ಪೃಥ್ವಿರಾಜ್ ಸುಕುಮಾರನ್ ಅಭಿನಯದಲ್ಲಿ ‘ಟೈಸನ್’ ಎಂಬ ಪ್ಯಾನ್ ಇಂಡಿಯಾದ ಚಿತ್ರವನ್ನು ನಿರ್ಮಿಸುವುದಾಗಿ ಹೊಂಬಾಳೆ ಫಿಲಂಸ್ ಘೋಷಿಸಿತ್ತು. ಆದರೆ, ಆ ಚಿತ್ರದ ಚಿತ್ರೀಕರಣ ಇನ್ನೂ ಪ್ರಾರಂಭವಾಗಿಲ್ಲ.
ಈ ಮಧ್ಯೆ, ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದ ‘L2E: ಎಂಪುರಾನ್’ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆಯು ವಿತರಿಸುತ್ತಿದೆ. ಈ ಚಿತ್ರ ಮಾರ್ಚ್.27ರಂದು ಮಲಯಾಳಂ ಅಲ್ಲದೆ, ಕನ್ನಡ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.
‘L2E: ಎಂಪುರಾನ್’ ಚಿತ್ರವು 2019ರಲ್ಲಿ ಬಿಡುಗಡೆಯಾದ ‘ಲೂಸಿಫರ್’ ಚಿತ್ರದ ಮುಂದುವರೆದ ಭಾಗವಾಗಿದ್ದು, ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ನಟ ಪೃಥ್ವಿರಾಜ್ ಸುಕುಮಾರನ್ ಮೊದಲ ಬಾರಿಗೆ ನಿರ್ದೇಶಕರಾದರು. ಈ ಚಿತ್ರದ ಯಶಸ್ಸಿನಿಂದ ಪ್ರೇರಿತರಾದ ಪೃಥ್ವಿರಾಜ್, ಈ ಚಿತ್ರದ ಮುಂದುರೆದ ಭಾಗವನ್ನು ಘೋಷಿಸಿದ್ದರು.
ಈ ಚಿತ್ರದಲ್ಲಿ ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್, ಟೋವಿನೋ ಥಾಮಸ್, ಮಂಜು ವಾರಿಯರ್, ಇಂದ್ರಜಿತ್ ಸುಕುಮಾರನ್, ಅಭಿಮನ್ಯು ಸಿಂಗ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸ್ವತಃ ಪೃಥ್ವಿರಾಜ್ ಸುಕುಮಾರನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ವಿಶೇಷವೆಂದರೆ, ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕೆಜಿಎಫ್ 1’, ‘ಕೆಜಿಎಫ್ 2’ ಮತ್ತು ‘ಕಾಂತಾರ’ ಚಿತ್ರಗಳನ್ನು ಕೇರಳದಲ್ಲಿ ಪೃಥ್ವಿರಾಜ್ ಸುಕುಮಾರನ್ ವಿತರಿಸಿದ್ದರು. ಅದಕ್ಕೆ ಪ್ರತಿಯಾಗಿ ಪೃಥ್ವಿರಾಜ್ ಅಭಿನಯದ ‘ಆಡುಜೀವಿತಂ’ (ದಿ ಗೋಟ್ ಲೈಫ್) ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ವಿತರಣೆ ಮಾಡಿತು. ಈಗ ‘L2E: ಎಂಪುರಾನ್’ ಚಿತ್ರವನ್ನು ಕರ್ನಾಟಕದಲ್ಲಿ ವಿತರಿಸುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…