ಬೆಂಗಳೂರು: ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಡಿ ರೇಣುಕಾಸ್ವಾಮಿ ಅವರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬಂಧಿಸಲಾಗಿದೆ.
ಕೇವಲ ಮೆಸೇಜ್ ಮಾಡಿದ ಆರೋಪಕ್ಕೆ ಯುವಕನೋರ್ವನ ಪ್ರಾಣ ತೆಗೆದ ನಟ ದರ್ಶನ್ ಹಾಗೂ ಅವರ 10ಜನ ಅನುಯಾಯಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇದರ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಪ್ರಕರಣ ಕುರಿತು ಮಾತನಾಡಿದ್ದು, ಕಾನೂನಿನಡಿ ಎಲ್ಲರೂ ಒಂದೇ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿರುವ ಅವರು, ಸಾಮಾಜಿಕ ಮಾಧ್ಯಮಗಳು ತೋರುವ ಮಾಹಿತಿ ಆಧರಿಸಿ ನಾವು ಕ್ರಮ ಕೈಗೊಳ್ಳಲು ಆಗುವುದಿಲ್ಲ. ಈ ಸಂಬಂಧ ಕಾನೂನು ಕ್ರಮದಲ್ಲಿ ದರ್ಶನ್ ಪ್ರಕರಣ ತನಿಖೆಯಾಗಬೇಕು. ದರ್ಶನ್ ಪರವಾಗಿ ಇಲ್ಲ ವಿರುದ್ಧವಾಗಿರುವ ಎಲ್ಲಾ ಮಾಹಿತಿಗಳನ್ನು ಕಲೆಹಾಕಿದ ಬಳಿಕ ಅವರ ಮೇಲೆ ಕ್ರಮ ಜರುಗಿಸಲಾಗುವುದು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಲ್ಲಿ ಯಾರನ್ನು ರಕ್ಷಿಸುವ ಕೆಲಸ ಆಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…