ಮನರಂಜನೆ

‘ಕಾಂತಾರ ಚಾಪ್ಟರ್ 1’ ಚಿತ್ರಕ್ಕಾಗಿ ರಿಷಭ್‍ ಶೆಟ್ಟಿ ಪಡೆದ ಸಂಭಾವನೆ ಎಷ್ಟು?

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಚಿತ್ರವು ಅಕ್ಟೋಬರ್.02ರಂದು ಬಿಡಗುಡೆಯಾಗುತ್ತಿದ್ದು, ಅಡ್ವಾನ್ಸ್ ಬುಕ್ಕಿಂಗ್‍ ಮೂಲಕ ಭರ್ಜರಿ ಟಿಕೆಟ್‍ಗಳು ಮಾರಾಟವಾಗುತ್ತಿವೆ.

ಈ ಚಿತ್ರಕ್ಕೆ ರಿಷಭ್‍ ಶೆಟ್ಟಿ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಜವಾಬ್ದಾರಿಗಳಿಗೆ ಅವರು ಪಡೆದಿರುವ ಸಂಭಾವನೆ ಎಷ್ಟು? ಒಂದು ರೂಪಾಯಿಯೂ ಪಡೆದಿಲ್ಲ ಎಂಬ ಸುದ್ದಿಯೊಂದು ರಾಷ್ಟ್ರೀಯ ಮಾಧ್ಯಮಗಳಿಂದ ಕೇಳಿಬರುತ್ತಿದೆ. ಅದರ ಪ್ರಕಾರ, ರಿಷಭ್‍ ಈ ಚಿತ್ರಕ್ಕೆ ಸಂಭಾವನೆ ಪಡೆಯುವುದರ ಬದಲು ಪ್ರಾಫಿಟ್‍ ಶೇರಿಂಗ್‍ ಆಯ್ಕೆ ಮಾಡಿಕೊಂಡಿದ್ದಾರಂತೆ. ಅಂದರೆ, ಚಿತ್ರದಲ್ಲಿ ಬರುವ ಲಾಭದಲ್ಲಿ ಇಷ್ಟು ಪರ್ಸಂಟೇಜ್‍ ಎಂದು ಅವರು ಸಂಭಾವನೆ ಪಡೆಯಲಿದ್ದಾರೆ. ಚಿತ್ರ ಎಷ್ಟು ಲಾಭ ಮಾಡುತ್ತದೋ, ಅವರ ಗಳಿಕೆ ಸಹ ಹೆಚ್ಚಾಗುತ್ತಾ ಹೋಗುತ್ತದೆ.

ಇದನ್ನು ಓದಿ: ‘ದಿ ರಾಜಾಸಾಬ್’ ಟ್ರೈಲರ್ ಬಿಡುಗಡೆ: 2026ರ ಜನವರಿ 09ಕ್ಕೆ ಚಿತ್ರ

‘ಕಾಂತಾರ – ಚಾಪ್ಟರ್ 1’ ಚಿತ್ರವು ಭಾರತದಲ್ಲಿ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ ಆಗಲಿದೆ. ಜಗತ್ತಿನ 30 ದೇಶಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಇದೇ ಮೊದಲ ಬಾರಿಗೆ ಸ್ಪಾನಿಶ್‍ ಭಾಷೆಗೆ ಡಬ್‍ ಆಗುತ್ತಿದ್ದು, ಸ್ಪಾನಿಶ್‍ ಭಾಷೆಗೆ ಡಬ್‍ ಆಗಿ ಬಿಡುಗಡೆಯಾಗುತ್ತಿರುವ ಮೊದಲ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಚಿತ್ರ ಪಾತ್ರವಾಗುತ್ತಿದೆ. ಕನ್ನಡ ಚಿತ್ರಗಳು ಉತ್ತರ ಅಮೇರಿಕಾದಲ್ಲಿ ಬಿಡಗುಡೆಯಾಗುವುದು ಹೊಸದೇನಲ್ಲ. ದಕ್ಷಿಣ ಅಮೇರಿಕಾದಲ್ಲಿ, ಅದರಲ್ಲೂ ಮೆಕ್ಸಿಕೋ ಮುಂತಾದ ದೇಶಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

30 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

32 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

34 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

37 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

47 mins ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago