ಮನರಂಜನೆ

ಆ್ಯಪಲ್ ಐಪ್ಯಾಡ್‌ ವಿರುದ್ಧ ಅಸಮಾಧಾನ ಹೊರಹಾಕಿದ ಹೃತಿಕ್ ರೋಷನ್‌

ಮುಂಬೈ: ಅಮೆರಿಕಾದ ಶ್ರೀಮಂತ ಕಂಪನಿ ಆ್ಯಪಲ್ ವಿರುದ್ಧ ಬಾಲಿವುಡ್ ಸೆಲೆಬ್ರಿಟಿಗಳು ಅಸಮಾಧಾನ ವ್ಯಕ್ತಪಡಿಸುತಿದ್ದು, ಬಾಲಿವುಡ್ ನಟ ಹೃತಿಕ್ ರೋಷನ್ ಕೂಡ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಅಷ್ಟಕ್ಕೂ ಕಂಪನಿ ಮಾಡಿದ ತಪ್ಪೇನೆ? ಹೃತಿಕ್ ರೋಷನ್ ಅಸಮಾಧಾನ ಹೊರಹಾಕಲು ಕಾರಣ ಏನು? ಇಲ್ಲಿದೆ ಮಾಹಿತಿ.

ಆ್ಯಪಲ್ ಕಂಪನಿಯು ಒಂದು ಹೊಸ ಐಪ್ಯಾಡ್ ಜಾಹೀರಾತುನ್ನು ಬಿಡುಗಡೆ ಮಾಡಿದೆ. ಐಪ್ಯಾಡ್ ಪ್ರೋ ಎಷ್ಟು ಪವರ್ ಫುಲ್ ಆಗಿದೆ ಎಂಬುದನ್ನು ತಿಳಿಸಲು ಈ ಜಾಹಿರಾತನ್ನು ಸಿದ್ಧಪಡಿಸಲಾಗಿದೆ. ಈ ಜಾಹಿರಾತನ್ನು ನಟ ಹೃತಿಕ್ ರೋಷನ್ ಖಾರವಾಗಿ ಖಂಡಿಸಿದ್ದಾರೆ.

ಪುಸ್ತಕಗಳು, ಸಂಗೀತ, ಸಾಧನಗಳು, ಟಿ.ವಿ, ಗ್ರಾಮೋಫೋನ್, ಗೊಂಬೆ, ಪೇಂಟಿಂಗ್ಸ್, ಕಲಾಕೃತಿಗಳು, ಸ್ಪೀಕರ್, ಕ್ಯಾಮೆರಾ ಮುಂತಾದ ವಸ್ತುಗಳನ್ನು ದೊಡ್ಡ ಕ್ರಸರ್ ಮೂಲಕ ನಾಶಪಡಿಸುವ ದೃಶ್ಯ ಇದರಲ್ಲಿದೆ. ಆ ಎಲ್ಲಾ ಸಾಧನಗಳ ಕೆಲಸವನ್ನು ಕೇವಲ ಒಂದು ಐಪ್ಯಾಡ್ ಮಾಡುತ್ತದೆ ಎಂಬುದನ್ನು ಗ್ರಾಹಕರಿಗೆ ತಿಳಿಸುವುದು ಈ ಜಾಹೀರಾತಿನ ಉದ್ದೇಶವಾಗಿದೆ.

ಈ ಜಾಹೀರಾತು ನೋಡಿದ ಅನೇಕ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸಿದ್ದು, ಈ ಜಾಹೀರಾತಿನಿಂದ ಸಿನಿಮಾ, ಸಂಗೀತ, ಚಿತ್ರಕಲೆ, ಬರವಣಿಗೆ ಮುಂತಾದ ವಿಷಯಗಳಿಗೆ ಅವಮಾನ ಮಾಡಲಾಗಿದೆ ಎಂದು ಹಾಲಿವುಡ್‌ನ ಸೆಲೆಬ್ರಿಟಿಗಳು ಕೂಡ ಅಭಿಪ್ರಾಯ ತಿಳಿಸಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹೃತಿಕ್ ರೋಷನ್ ಬರೆದುಕೊಂಡಿದ್ದಾರೆ. ಆ್ಯಪಲ್ ಕಂಪನಿಯ ಹೊಸ ಜಾಹೀರಾತು ಎಷ್ಟು ಕಳಪೆ ಮತ್ತು ಅವೈಜ್ಞಾನಿಕದಿಂದ ಕೂಡಿದೆ ಎಂದು ಪೋಸ್ಟ್ ಮಾಡಿ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಆ್ಯಪಲ್ ಕಂಪನಿ ಈ ಜಾಹೀರಾತು ಕಲಾ ಪ್ರಕಾರಗಳಿಗೆ ಅವಮಾನ ಮಾಡಿದೆ ಎಂದು ನೆಟ್ಟಿಗರು ಕೂಡ ಕಮೆಂಟ್ ಮಾಡುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ವರ್ಷದ ಸಂಭ್ರಮಾಚರಣೆ ವೇಳೆ ಪೊಲೀಸರ ಹದ್ದಿನ ಕಣ್ಣು

ಮೈಸೂರು: ಹೊಸ ವರ್ಷ 2025ರ ಆಗಮನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನತೆ ಸಂಭ್ರಮಾಚರಣೆ ಮಾಡಲು…

8 mins ago

ಕಾಫಿ ಬೆಳೆಗಾರರಿಗೆ ಗುಡ್‌ನ್ಯೂಸ್‌ ನೀಡಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…

21 mins ago

ಬಿಜೆಪಿ ಬೆಳಗಾವಿ ಚಲೋಗೆ ಅನುಮತಿ ಕೊಡಲ್ಲ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…

35 mins ago

ಕಾಂಗ್ರೆಸ್‌ ಸರ್ಕಾರ ರೈತರ ಪರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್‌ ಸರ್ಕಾರ ರೈತರ…

1 hour ago

ಹಾಸನಕ್ಕೆ ಎಚ್‌ಡಿಡಿ ಕುಟುಂಬ ನೀಡಿದ ಕೊಡುಗೆ ಏನೆಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಎಚ್‌ಡಿಕೆ

ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ…

2 hours ago

ಫೇಕ್‌ ಎನ್‌ಕೌಂಟರ್‌: ಪ್ರಹ್ಲಾದ್‌ ಜೋಶಿ ಹೇಳಿಕೆಗೆ ಎಚ್.ಸಿ.ಮಹದೇವಪ್ಪ ತಿರುಗೇಟು

ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್‌ ಎನ್‌ಕೌಂಟರ್‌ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ…

2 hours ago