ನಿತೀಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ಯಶ್, ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿರುವ ವಿಷಯ ಗೊತ್ತಿರಬಹುದು. ಡಿಸೆಂಬರ್ ತಿಂಗಳಿನಿಂದ ಯಶ್ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ, ಈ ಚಿತ್ರವನ್ನು ಒಪ್ಪಿಕೊಂಡಿದ್ದೇಕೆ ಎಂದು ಯಶ್ ಇದೇ ಮೊದಲ ಬಾರಿಗೆ ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ‘ದಿ ಹಾಲಿವುಡ್ ರಿಪೋರ್ಟರ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ‘ಅದೊಂದು ಅದ್ಭುತವಾದ ಪಾತ್ರ. ಅದೇ ಕಾರಣಕ್ಕೆ ನಾನು ಆ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ. ಬಹುಶಃ ಅದಲ್ಲದೆ ಬೇರೆ ಯಾವುದಾದರೂ ಪಾತ್ರವನ್ನು ಮಾಡುವುದಕ್ಕೆ ಒಪ್ಪುತ್ತಿದ್ದಿರಾ? ಎಂಬ ಪ್ರಶ್ನೆಯನ್ನು ಕೇಳಬಹುದು. ಇಲ್ಲ, ರಾವಣನ ಪಾತ್ರಕ್ಕೆ ಹಲವು ಮಜಲುಗಳಿವೆ ಮತ್ತು ಒಬ್ಬ ನಟನಾಗಿ ಆ ತರಹದ ಪಾತ್ರ ಮಾಡುವುದು ಬಹಳ ಇಷ್ಟ. ಆ ಪಾತ್ರಕ್ಕೆ ಸಾಕಷ್ಟು ಸ್ಕೋಪ್ ಇದೆ ಮತ್ತು ಒಬ್ಬ ನಟನಾಗಿ ಆ ಪಾತ್ರ ನಿರ್ವಹಿಸಲು ಕಾತುರದಿಂದ ಕಾಯುತ್ತಿದ್ದೇನೆ’ ಎಂದು ಯಶ್ ಹೇಳಿದ್ದಾರೆ.
ಈ ಚಿತ್ರದ ಭಾಗವಾಗಿರುವುದರ ಕುರಿತು ಮಾತನಾಡಿರುವ ಯಶ್, ‘ನಾನು ‘ಟಾಕ್ಸಿಕ್’ ಚಿತ್ರದ ವಿಎಫ್‍ಎಕ್ಸ್ ಕೆಲಸ ಕುರಿತು ಓಡಾಡುತ್ತಿದ್ದಾಗ, DNEG ಮತ್ತು ಪ್ರೈಮ್ ಫೋಕಸ್ ಸಂಸ್ಥೆಗಳ ನಮಿತ್ ಮಲ್ಹೋತ್ರಾ ಅವರನ್ನು ಭೇಟಿ ಮಾಡುವ ಸಂದರ್ಭ ಬಂತು. ಆಗ ನಮಿತ್, ರಾಮಾಯಣ ಚಿತ್ರದ ಬಗ್ಗೆ ಹೇಳಿದರು. ನಮಿತ್ ಅವರ ದೃಷ್ಟಿಕೋನ ಇಷ್ಟವಾಯಿತು. ಚಿತ್ರವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಮುಟ್ಟಿಸಬೇಕು ಎಂಬ ಅವರ ಕಲ್ಪನೆಗೆ ಕೈಜೋಡಿಸಬೇಕು ಎಂದನಿಸಿತು. ಹಾಗಾಗಿ, ‘ರಾಮಾಯಣ’ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದು ಯಶ್ ಹೇಳಿದ್ದಾರೆ.
‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ತಯಾರಾಗಲಿದ್ದು, ಈ ಹಿಂದೆ ‘ದಂಗಲ್’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್ ತಿವಾರಿ, ಈ ‘ರಾಮಾಯಣ’ ಚಿತ್ರದ ನಿರ್ದೇಶಕರು. ರಾಮನಾಗಿ ರಣಬೀರ್ ಕಪೂರ್ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದು, ಯಶ್ ಈ ಚಿತ್ರದಲ್ಲಿ ರಾವಣನಾಗಿ ನಟಿಸಲಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…