ಮನರಂಜನೆ

ನಾನು ಬೆಳೆಯಬೇಕು ಎಂಬ ಸ್ವಾರ್ಥದಿಂದ ಈ ಚಿತ್ರ ಮಾಡಿದೆ: ಅಜೇಯ್‍ ರಾವ್‍

ಅಜೇಯ್‍ ರಾವ್ ಅಭಿನಯದ ‘ಯುದ್ಧ ಕಾಂಡ’ ಚಿತ್ರದ ಸುದ್ದಿಯೇ ಇರಲಿಲ್ಲ. ಎರಡು ವರ್ಷಗಳ ಹಿಂದೆಯೇ ಘೋಷಣೆಯಾದರೂ, ಚಿತ್ರ ಯಾವ ಹಂತದಲ್ಲಿದೆ ಎಂಬ ಸೂಕ್ತವಾದ ಮಾಹಿತಿ ಇರಲಿಲ್ಲ. ಈಗ ಚಿತ್ರವನ್ನು ಸದ್ದಿಲ್ಲದೆ ಮುಗಿಸಿಕೊಂಡು ಬಂದಿದ್ದಾರೆ ಅಜೇಯ್‍ ರಾವ್‍. ಅಷ್ಟೇ ಅಲ್ಲ, ಚಿತ್ರವನ್ನು ಏ.18ಕ್ಕೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

ಚಿತ್ರದ ಒಂದು ಹಾಡು ಬಿಡುಗಡೆ ಮತ್ತು ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯ ಪತ್ರಿಕಾಗೋಷ್ಠಿಯಲ್ಲಿ ಅಜೇಯ್‍ ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಈ ಚಿತ್ರ ಮಾಡುವುದಕ್ಕೆ ತಮಗೆ ಎರಡು ಸ್ವಾರ್ಥಗಳಿವೆ ಎಂದು ಹೇಳಿದ್ದಾರೆ. ಅದೇ ಕಾರಣಕ್ಕೆ ಅವರು ಚಿತ್ರವನ್ನು ನಿರ್ಮಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈ ಚಿತ್ರವು ದೇಶದಾದ್ಯಂತ ಸದ್ದು ಮಾಡಬೇಕೆಂಬುದು ಮೊದಲ ಸ್ವಾರ್ಥವಾದರೆ, ತಾನು ಕನ್ನಡದ ಮುಂಚೂಣಿಯ ನಾಯಕರ ಪೈಕಿ ಬಂದು ನಿಲ್ಲಬೇಕೆಂಬುದು ಎರಡನೆಯ ಸ್ವಾರ್ಥ ಎಂದು ಹೇಳಿದ್ದಾರೆ.

ತನಗೆ ಸಿಗಬೇಕಾದ ಮಾನ್ಯತೆ ಸಿಕ್ಕಿಲ್ಲ ಎಂಬ ಬೇಸರ, ಕೊರಗು ಇದೆ ಎನ್ನುವ ಅಜೇಯ್‍ ರಾವ್, ‘ಕನ್ನಡದಲ್ಲಿ ಯಾರೂ ನನ್ನನ್ನು ಸರಿಯಾಗಿ ಬಳಸಿಕೊಂಡಿಲ್ಲ. ಯಾರೂ ಬಳಸಿಕೊಳ್ಳದಿದ್ದಾಗ, ನಾವೇ ಆ ಪ್ರಯತ್ನ ಮಾಡಬೇಕು ಎಂದು ನಂಬಿರುವವನು ನಾನು. ನನ್ನನ್ನು ನಾನೇ ಸೃಷ್ಟಿ ಮಾಡಿಕೊಳ್ಳಬೇಕು, ನನ್ನ ಭವಿಷ್ಯವನ್ನು ನಾನೇ ಬರೆದುಕೊಳ್ಳಬೇಕು ಎಂದು ನಿರ್ಧಾರ ಮಾಡಿ, ಈ ಚಿತ್ರಕ್ಕೆ ನಿರ್ಮಾಣಕ್ಕೆ ಕೈ ಹಾಕಿದೆ. ನಾನು ಬೆಳೆಯಬೇಕು ಎಂಬ ಸ್ವಾರ್ಥದಿಂದ ಈ ಚಿತ್ರ ಮಾಡಿದೆ’ ಎನ್ನುತ್ತಾರೆ ಅಜೇಯ್‍.

ತನಗೆ ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡಬೇಕು ಎಂಬ ಆಸೆ ಎನ್ನುವ ಅಜೇಯ್‍, ‘ರೀ ನಟನೆ ಮಾಡಿಕೊಂಡಿರುತ್ತೇನೆ, ಬಂದ ದುಡ್ಡಲ್ಲಿ ಮನೆ ನೋಡಿಕೊಂಡಿದ್ದರೆ ಸಾಕು ಎಂದರೆ ಆರಾಮಾಗಿ ಇರಬಹುದು. ನನಗೆ ನಿರ್ಮಾಣ ಅಥವಾ ಹೋರಾಟ ಮಾಡುವ ಅವಶ್ಯಕತೆಯೇ ಇರುತ್ತಿರಲಿಲ್ಲ. ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡಬೇಕು ಎಂಬ ಆಸೆ ನನಗಿದೆ. ಈಗಾಗಲೇ ಯಶ್‍, ರಕ್ಷಿತ್‍ ಶೆಟ್ಟಿ, ರಿಷಭ್‍ ಶೆಟ್ಟಿ ಮುಂತಾದವರು ಕನ್ನಡ ಚಿತ್ರರಂಗವನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರೆಲ್ಲರಿಂದ ನಾನು ಬಹಳ ಸ್ಫೂರ್ತಿ ಪಡೆದಿದ್ದೇನೆ. ಅವರೆಲ್ಲರೂ ನಾನು ಬಂದ ನಂತರ ಬಂದವರು. ಈ ಕಾರಣಕ್ಕೆ ನಾನು ಮುಂಚೂಣಿಗೆ ಬರಬೇಕು ಎಂಬ ಆಸೆ ಇದೆಯೇ ಹೊರತು, ಕೋಟಿ ಕೋಟಿ ಸಂಭಾವನೆ ಪಡೆದು ಮೆರೆಯಬೇಕು ಎಂಬ ಆಸೆ ಇಲ್ಲ’ ಎನ್ನುತ್ತಾರೆ ಅಜೇಯ್‍.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

5 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

5 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

5 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

5 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

5 hours ago