ನವದೆಹಲಿ: ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ನಟಿ ಕಂಗನಾ ರಣಾವತ್ ಸ್ವರ್ಧಿಸುತ್ತಿದ್ದಾರೆ. ಪ್ರತಿನಿತ್ಯ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ.
ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು ಎಕ್ಸ್ನಲ್ಲಿ ಹೇಳಿಕೆ ನೀಡಿದರು. ಈ ಹೇಳಿಕೆಯಿಂದ ಎಕ್ಸ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರ ಹೇಳಿಕೆಗೆ ಎಕ್ಸ್ನಲ್ಲೇ ಕಂಗನಾ ತಿರುಗೇಟು ನೀಡಿರುವ ಅವರು ತಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ ಎಂದಿದ್ದಾರೆ.
ಎಕ್ಸ್‌ನಲ್ಲೇನಿದೆ?
ನಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ, ನನ್ನ ಬಗ್ಗೆ ಸಂಪೂರ್ಣವಾಗಿ ಆಧಾರರಹಿತ ವದಂತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ, ನಾನು ದಶಕಗಳಿಂದ ಯೋಗ ಮತ್ತು ಆಯುರ್ವೇದ ಜೀವನ ವಿಧಾನವನ್ನು ಪ್ರತಿಪಾದಿಸುತ್ತಿದ್ದೇನೆ ಮತ್ತು ಪ್ರಚಾರ ಮಾಡುತ್ತಿದ್ದೇನೆ ಈಗ ಅಂತಹ ತಂತ್ರಗಳು ಕಳಂಕಕ್ಕೆ ಕಾರಣವಾಗುವುದಿಲ್ಲ. ನನ್ನ ಚಿತ್ರ. ನನ್ನ ಜನರು ನನ್ನನ್ನು ತಿಳಿದಿದ್ದಾರೆ ಮತ್ತು ನಾನು ಹೆಮ್ಮೆಯ ಹಿಂದೂ ಎಂದು ಅವರಿಗೆ ತಿಳಿದಿದೆ ಮತ್ತು ಯಾವುದೂ ಅವರನ್ನು ದಾರಿ ತಪ್ಪಿಸುವುದಿಲ್ಲ, ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…