ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್ ಹಾಗೂ ನಟನೆಗೂ ವಿದಾಯ ಹೇಳುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ಶಿಮ್ಲಾದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ರಣಾವತ್ ಸ್ಪರ್ಧಿಸಿದ್ದಾರೆ. ಮಂಗಳವಾರ ಮಂಡಿ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಚುನಾವಣಾ ಪ್ರಚಾರಕ್ಕಾಗಿ ತನ್ನೆಲ್ಲಾ ಸಮಯವನ್ನು ಮೀಸಲಿಟ್ಟಿರುವುದಾಗಿ ಹೇಳಿದ್ದರು.
ಆಜ್‌ತಕ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುವ ವೇಳೆ ಅವರು ಬಾಲಿವುಡ್‌ಗೆ ಗುಡ್‌ಬೈ ಹೇಳುವ ಬಗ್ಗೆ ತಿಳಿಸಿದ್ದಾರೆ. “ತಾವು ಈ ಬಾರಿ ಮಂಡಿ ಕ್ಷೇತ್ರದಿಂದ ವಿಜಯಗಳಿಸಿದ ಬಳಿಕ ತನ್ನ ಹೊಣೆಗಾರಿಕೆಯನ್ನು ನಿಭಾಯಿಸಿ ಚಿತ್ರರಂಗದಿಂದ ಹಂತ ಹಂತವಾಗಿ ದೂರ ಉಳಿಯುವುದಾಗಿ ಅವರು ಹೇಳಿದ್ದಾರೆ.
ಇನ್ನು ಅವರ ಬಳಿ ಚಿನ್ನಾಭರಣ, ಕಾರು, ಆಸ್ತಿ ಸೇರಿದಂತೆ 91 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಜತೆಗೆ ಅವರಿಗೆ 17 ಕೋಟಿ ರೂ. ಸಾಲವಿದೆ ಎಂದು ಮಾಹಿತಿ ನೀಡಿದ್ದಾರೆ.