ಮನರಂಜನೆ

ಲೋಕಸಮರ 2024: ಮಂಡಿ ಕ್ಷೇತ್ರದಿಂದ ಗೆದ್ದರೆ ನಟನೆಗೆ ವಿದಾಯ ಹೇಳುತ್ತೇನೆ: ಕಂಗನಾ

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್‌ ಹಾಗೂ ನಟನೆಗೂ ವಿದಾಯ ಹೇಳುತ್ತೇನೆ ಎಂದು ಬಾಲಿವುಡ್‌ ನಟಿ ಕಂಗನಾ ರಣಾವತ್‌ ಹೇಳಿದ್ದಾರೆ.

ಶಿಮ್ಲಾದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ರಣಾವತ್‌ ಸ್ಪರ್ಧಿಸಿದ್ದಾರೆ. ಮಂಗಳವಾರ ಮಂಡಿ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಚುನಾವಣಾ ಪ್ರಚಾರಕ್ಕಾಗಿ ತನ್ನೆಲ್ಲಾ ಸಮಯವನ್ನು ಮೀಸಲಿಟ್ಟಿರುವುದಾಗಿ ಹೇಳಿದ್ದರು.

ಆಜ್‌ತಕ್‌ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುವ ವೇಳೆ ಅವರು ಬಾಲಿವುಡ್‌ಗೆ ಗುಡ್‌ಬೈ ಹೇಳುವ ಬಗ್ಗೆ ತಿಳಿಸಿದ್ದಾರೆ. “ತಾವು ಈ ಬಾರಿ ಮಂಡಿ ಕ್ಷೇತ್ರದಿಂದ ವಿಜಯಗಳಿಸಿದ ಬಳಿಕ ತನ್ನ ಹೊಣೆಗಾರಿಕೆಯನ್ನು ನಿಭಾಯಿಸಿ ಚಿತ್ರರಂಗದಿಂದ ಹಂತ ಹಂತವಾಗಿ ದೂರ ಉಳಿಯುವುದಾಗಿ ಅವರು ಹೇಳಿದ್ದಾರೆ.

ಇನ್ನು ಅವರ ಬಳಿ ಚಿನ್ನಾಭರಣ, ಕಾರು, ಆಸ್ತಿ ಸೇರಿದಂತೆ 91 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಜತೆಗೆ ಅವರಿಗೆ 17 ಕೋಟಿ ರೂ. ಸಾಲವಿದೆ ಎಂದು ಮಾಹಿತಿ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

58 mins ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

1 hour ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

1 hour ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

2 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

4 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

9 hours ago