Mysore
26
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕ್ಷಮೆ ಕೇಳದಿದ್ದರೆ ರಾಜ್ಯದಲ್ಲಿ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆಗೆ ನಿಷೇಧ

kamal hasan

ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್‍ ಹಾಸನ್‍, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್‍ ಲೈಫ್‍’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮದಲ್ಲಿ ಮಾತನಾಡುವ ಭರದಲ್ಲಿ ‘ಕನ್ನಡವು ತಮಿಳಿನಿಂದ ಹುಟ್ಟಿತು …’ ಎಂದು ಕಮಲ್‍ ಹಾಸನ್‍ ಹೇಳಿದ್ದರು. ನಟ ಶಿವರಾಜಕುಮಾರ್‍ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

ಕಮಲ್‍ ಹಾಸನ್‍ ಅವರ ಈ ಹೇಳಿಕೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅವರು ಕ್ಷಮಾಪಣೆ ಕೇಳಬೇಕು ಎಂಬ ಒತ್ತಾಯ ಹೆಚ್ಚಾಯಿತು. ಆದರೆ, ಕಮಲ್‍ ಹಾಸನ್‍ ತಾವು ಕ್ಷಮಾಪಣೆ ಕೇಳುವುದಿಲ್ಲ ಎಂದು ಹೇಳಿದ್ದರು. ‘ಇತಿಹಾಸಕಾರರು ಹೇಳಿದ್ದನ್ನೇ ನಾನು ಹೇಳಿದ್ದೇನೆ, ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ. ಪ್ರೀತಿಯಲ್ಲಿ ಕ್ಷಮೆಯ ಮಾತು ಬರುವುದಿಲ್ಲ’ ಎಂದು ಹೇಳಿದ್ದರು.

ಕಮಲ್‍ ಅವರ ಹೇಳಿಕೆಯನ್ನು ವಿರೋಧಿಸಿ, ಕನ್ನಡಪರ ಹೋರಾಟಗಾರರು ಗುರುವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕಿದರು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣ ಮುತ್ತಿಗೆ ಹಾಕಿ ಕಮಲ್ ಕ್ಷಮೆ ಕೇಳೋವರೆಗೂ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿದರು.

ನಂತರ ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ‘ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳು ಸಂಸ್ಥೆಗಳು ಕಮಲ್‍ ಹಾಸನ್‍ ಅವರ ಮಾತುಗಳನ್ನು ಖಂಡಿಸಿವೆ. ಅವರ ಹೊಸ ಚಿತ್ರಗೆ ನಿರ್ಬಂಧ ಹಾಕಬೇಕು ಎಂದು ಹೇಳಿವೆ. ಕಮಲ್ ಹಾಸನ್ ಮಾಡಿರುವ ತಪ್ಪನ್ನ ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕ್ಷಮೆ ಯಾಚಿಸದ ಹೊರತು ಚಿತ್ರ ಬಿಡುಗಡೆ ಮಾಡದಂತೆ ಈಗಾಗಲೇ ರಾಜ್ಯದಲ್ಲಿ ಚಿತ್ರ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರಿಗೆ ಸೂಚಿಸಲಾಗಿದೆ. ಕಮಲ್‍ ಹಾಸನ್‍ ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ, ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.

Tags:
error: Content is protected !!