kamal hasan
ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್ ಹಾಸನ್, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್ ಲೈಫ್’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಮಾತನಾಡುವ ಭರದಲ್ಲಿ ‘ಕನ್ನಡವು ತಮಿಳಿನಿಂದ ಹುಟ್ಟಿತು …’ ಎಂದು ಕಮಲ್ ಹಾಸನ್ ಹೇಳಿದ್ದರು. ನಟ ಶಿವರಾಜಕುಮಾರ್ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.
ಕಮಲ್ ಹಾಸನ್ ಅವರ ಈ ಹೇಳಿಕೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅವರು ಕ್ಷಮಾಪಣೆ ಕೇಳಬೇಕು ಎಂಬ ಒತ್ತಾಯ ಹೆಚ್ಚಾಯಿತು. ಆದರೆ, ಕಮಲ್ ಹಾಸನ್ ತಾವು ಕ್ಷಮಾಪಣೆ ಕೇಳುವುದಿಲ್ಲ ಎಂದು ಹೇಳಿದ್ದರು. ‘ಇತಿಹಾಸಕಾರರು ಹೇಳಿದ್ದನ್ನೇ ನಾನು ಹೇಳಿದ್ದೇನೆ, ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ. ಪ್ರೀತಿಯಲ್ಲಿ ಕ್ಷಮೆಯ ಮಾತು ಬರುವುದಿಲ್ಲ’ ಎಂದು ಹೇಳಿದ್ದರು.
ಕಮಲ್ ಅವರ ಹೇಳಿಕೆಯನ್ನು ವಿರೋಧಿಸಿ, ಕನ್ನಡಪರ ಹೋರಾಟಗಾರರು ಗುರುವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕಿದರು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣ ಮುತ್ತಿಗೆ ಹಾಕಿ ಕಮಲ್ ಕ್ಷಮೆ ಕೇಳೋವರೆಗೂ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿದರು.
ನಂತರ ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ‘ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳು ಸಂಸ್ಥೆಗಳು ಕಮಲ್ ಹಾಸನ್ ಅವರ ಮಾತುಗಳನ್ನು ಖಂಡಿಸಿವೆ. ಅವರ ಹೊಸ ಚಿತ್ರಗೆ ನಿರ್ಬಂಧ ಹಾಕಬೇಕು ಎಂದು ಹೇಳಿವೆ. ಕಮಲ್ ಹಾಸನ್ ಮಾಡಿರುವ ತಪ್ಪನ್ನ ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕ್ಷಮೆ ಯಾಚಿಸದ ಹೊರತು ಚಿತ್ರ ಬಿಡುಗಡೆ ಮಾಡದಂತೆ ಈಗಾಗಲೇ ರಾಜ್ಯದಲ್ಲಿ ಚಿತ್ರ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರಿಗೆ ಸೂಚಿಸಲಾಗಿದೆ. ಕಮಲ್ ಹಾಸನ್ ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ, ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…