‘ಕೆಡಿ – ದಿ ಡೆವಿಲ್’ ಚಿತ್ರದ ಮೊದಲ ಹಾಡು, ‘ಶಿವ ಶಿವ’ ಅತೀ ಹೆಚ್ಚು ವೀಕ್ಷಣೆಯಾಗುವ ಮೂಲಕ ಎಲ್ಲಾ ಕಡೆ ವೈರಲ್ ಆಗಿತ್ತು. ಇದೀಗ ಚಿತ್ರದ ಮತ್ತೊಂದು ಹಾಡು ‘ಸೆಟ್ಟಾಗಲ್ಲಾ ಕಣೆ ನಂಗೂ ನಿಂಗೂ …’ ಬಿಡುಗಡೆಯಾಗಿದೆ. ಪ್ರೇಮ್ ಅವರೇ ರಚಿಸಿರುವ ಈ ಹಾಡಿಗೆ ಹೆಸರಾಂತ ಗಾಯಕ ಮಿಖಾ ಸಿಂಗ್ ದನಿಯಾಗಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್‍ನ ಆನಂದ್ ಆಡಿಯೋ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.
ಈ ಹಾಡಿಗೆ ಪ್ರೇಮ್ ಹಾಗೂ ಅರ್ಜುನ್ ಜನ್ಯ ಸೇರಿ ಹೊಸ ಐಡಿಯಾ ಹುಡುಕಿದ್ದಾರೆ. ಸದ್ಯ ಈ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಆಗಿದ್ದು, ಚಿತ್ರೀಕರಣ ಇನ್ನೂ ಆಗಬೇಕಿದೆ. ಹೌದು, ಈ ಹಾಡನ್ನು ಕೇಳಿ, ಅದಕ್ಕೆ ಸೂಕ್ತವಾದ ಒಂದು ಹುಕ್ ಸ್ಟೆನ್‍ನ್ನು ಪ್ರೇಕ್ಷಕರೇ ತಾವೇ ಅದನ್ನು ಚಿತ್ರತಂಡಕ್ಕೆ ಕಳಿಸಬೇಕು. ಅದರಲ್ಲಿ ಅತ್ಯುತ್ತಮವಾದ ನೃತ್ಯವನ್ನು ಆಯ್ಕೆ ಮಾಡಿ, ಹಾಡಿನಲ್ಲಿ ಬಳಸಿಕೊಳ್ಳಲಾಗುತ್ತದೆ. ಅಭಿಮಾನಿಗಳು ಹಾಕಿದ ಸ್ಟೆಪ್ ಅನ್ನು ನಾಯಕ, ನಾಯಕಿ ಹಾಡಿನಲ್ಲಿ ಹಾಕುತ್ತಾರೆ.
ಆ ಸ್ಟೆಪ್ ಕಳಿಸಿದವರನ್ನು ಕರೆಸಿ ಗೌರವಿಸುತ್ತೇವೆ ಎಂದ ನಿರ್ದೇಶಕ ಪ್ರೇಮ್, ‘ಪ್ರೇಕ್ಷಕರ ಪ್ರತಿಭೆಯನ್ನು ಪ್ರೋತ್ಸಾಹಿಸುವ ಪ್ರಯತ್ನ ಇದು. ತಮ್ಮ ಮೆಚ್ಚಿನ ಸ್ಟಾರ್ ಹೀಗೇ ಡಾನ್ಸ್ ಮಾಡಿದರೆ ಚೆನ್ನಾಗಿರುತ್ತೆ ಎಂದು ಕಲ್ಪಿಸಿಕೊಂಡಿರುತ್ತಾರೆ. ಅದು ನಮಗೂ ಚೆನ್ನಾಗಿದೆ ಎಂದೆನಿಸಿದರೆ, ಅದನ್ನು ಚಿತ್ರದಲ್ಲಿ ಬಳಸಿಕೊಳ್ಳುತ್ತೇವೆ’ ಎಂದರು.
1970-75ರ ಸಮಯದಲ್ಲಿ ನಡೆದ ನೈಜ ಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ ಈ ಚಿತ್ರದಲ್ಲಿದೆ. ಚಿತ್ರಕ್ಕಾಗಿಯೇ 20 ಎಕರೆಯಷ್ಟು ವಿಶಾಲವಾದ ಜಾಗದಲ್ಲಿ ಬಹು ಕೋಟಿ ವೆಚ್ಚದಲ್ಲಿ ಅದ್ದೂರಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ‘ವಿಕ್ರಾಂತ್ ರೋಣ’ ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಚಿತ್ರಕ್ಕಿದ್ದು, ಸಂಜಯ್ ದತ್, ಶಿಲ್ಪಾ ಶೆಟ್ಟಿ, ನೋರಾ ಫತೇಹಿ, ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದವರು ಅಭಿನಯಿಸಿದ್ದಾರೆ.
ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಕೆಡಿ – ದಿ ಡೆವಿಲ್’ ಚಿತ್ರವು ಕನ್ನಡ, ತೆಲುಗು, ತಮಿಳು ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…