ಮನರಂಜನೆ

ಸೆಟ್‍ ಆಗೋಲ್ಲ ಕಣೆ ನಂಗೂ ನಿಂಗೂ …’ ಅಂತಿದ್ದಾರೆ ಧ್ರುವ ಸರ್ಜಾ

‘ಕೆಡಿ – ದಿ ಡೆವಿಲ್‍’ ಚಿತ್ರದ ಮೊದಲ ಹಾಡು, ‘ಶಿವ ಶಿವ’ ಅತೀ ಹೆಚ್ಚು ವೀಕ್ಷಣೆಯಾಗುವ ಮೂಲಕ ಎಲ್ಲಾ ಕಡೆ ವೈರಲ್ ಆಗಿತ್ತು. ಇದೀಗ ಚಿತ್ರದ ಮತ್ತೊಂದು ಹಾಡು ‘ಸೆಟ್ಟಾಗಲ್ಲಾ ಕಣೆ ನಂಗೂ ನಿಂಗೂ …’ ಬಿಡುಗಡೆಯಾಗಿದೆ. ಪ್ರೇಮ್ ಅವರೇ ರಚಿಸಿರುವ ಈ ಹಾಡಿಗೆ ಹೆಸರಾಂತ ಗಾಯಕ‌ ಮಿಖಾ ಸಿಂಗ್ ದನಿಯಾಗಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್‍ನ ಆನಂದ್‍ ಆಡಿಯೋ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

ಈ ಹಾಡಿಗೆ ಪ್ರೇಮ್ ಹಾಗೂ ಅರ್ಜುನ್ ಜನ್ಯ ಸೇರಿ ಹೊಸ ಐಡಿಯಾ ಹುಡುಕಿದ್ದಾರೆ. ಸದ್ಯ ಈ ಹಾಡಿನ ಲಿರಿಕಲ್‍ ವೀಡಿಯೋ ಬಿಡುಗಡೆ ಆಗಿದ್ದು, ಚಿತ್ರೀಕರಣ ಇನ್ನೂ ಆಗಬೇಕಿದೆ. ಹೌದು,‌ ಈ ಹಾಡನ್ನು ಕೇಳಿ, ಅದಕ್ಕೆ ಸೂಕ್ತವಾದ ಒಂದು ಹುಕ್ ಸ್ಟೆನ್‍ನ್ನು ಪ್ರೇಕ್ಷಕರೇ ತಾವೇ ಅದನ್ನು ಚಿತ್ರತಂಡಕ್ಕೆ ಕಳಿಸಬೇಕು. ಅದರಲ್ಲಿ ಅತ್ಯುತ್ತಮವಾದ ನೃತ್ಯವನ್ನು ಆಯ್ಕೆ ಮಾಡಿ, ಹಾಡಿನಲ್ಲಿ ಬಳಸಿಕೊಳ್ಳಲಾಗುತ್ತದೆ. ಅಭಿಮಾನಿಗಳು ಹಾಕಿದ ಸ್ಟೆಪ್ ಅನ್ನು ನಾಯಕ, ನಾಯಕಿ ಹಾಡಿನಲ್ಲಿ ಹಾಕುತ್ತಾರೆ.

ಆ ಸ್ಟೆಪ್ ಕಳಿಸಿದವರನ್ನು ಕರೆಸಿ ಗೌರವಿಸುತ್ತೇವೆ ಎಂದ ನಿರ್ದೇಶಕ ಪ್ರೇಮ್, ‘ಪ್ರೇಕ್ಷಕರ ಪ್ರತಿಭೆಯನ್ನು ಪ್ರೋತ್ಸಾಹಿಸುವ ಪ್ರಯತ್ನ ಇದು. ತಮ್ಮ‌ ಮೆಚ್ಚಿನ ಸ್ಟಾರ್ ಹೀಗೇ ಡಾನ್ಸ್ ಮಾಡಿದರೆ ಚೆನ್ನಾಗಿರುತ್ತೆ ಎಂದು ಕಲ್ಪಿಸಿಕೊಂಡಿರುತ್ತಾರೆ. ಅದು ನಮಗೂ ಚೆನ್ನಾಗಿದೆ ಎಂದೆನಿಸಿದರೆ, ಅದನ್ನು ಚಿತ್ರದಲ್ಲಿ ಬಳಸಿಕೊಳ್ಳುತ್ತೇವೆ’ ಎಂದರು.‌

1970-75ರ ಸಮಯದಲ್ಲಿ ನಡೆದ ನೈಜ ಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ ಈ ಚಿತ್ರದಲ್ಲಿದೆ. ಚಿತ್ರಕ್ಕಾಗಿಯೇ 20 ಎಕರೆಯಷ್ಟು ವಿಶಾಲವಾದ ಜಾಗದಲ್ಲಿ ಬಹು ಕೋಟಿ ವೆಚ್ಚದಲ್ಲಿ ಅದ್ದೂರಿ ಸೆಟ್‌ ಹಾಕಿ ಚಿತ್ರೀಕರಣ ಮಾಡಲಾಗಿದೆ. ‘ವಿಕ್ರಾಂತ್ ರೋಣ’ ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಚಿತ್ರಕ್ಕಿದ್ದು, ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ, ನೋರಾ ಫತೇಹಿ, ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದವರು ಅಭಿನಯಿಸಿದ್ದಾರೆ.

ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಕೆಡಿ – ದಿ ಡೆವಿಲ್‍’ ಚಿತ್ರವು ಕನ್ನಡ, ತೆಲುಗು, ತಮಿಳು ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

2 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

2 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

2 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

2 hours ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

2 hours ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

2 hours ago