ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.
ಈ ಬಗ್ಗೆ ಸೆ.16ರಂದು ಸಭೆ ಕೂಡ ನಡೆದಿದೆ. ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಶೋಷಣೆ ಇಲ್ಲ ಎನ್ನೊದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್, ಚಿತ್ರರಂಗದಲ್ಲಿ ಲೈಂಗಿಕ ಶೋಷಣೆ ಇಲ್ಲ ಅಂತ ಹೇಳೊಕ್ಕಾಗಲ್ಲ. ಶೋಷಣೆ ಇಲ್ಲ ಎನ್ನುವುದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ. ನನಗೆ ಯಾವತ್ತೂ ಈ ರೀತಿಯ ಅನುಭವ ಆಗಿಲ್ಲ. ಆದರೆ ಶೋಷಣೆ ಆಗಿರುವವರು ನನ್ನ ಬಳಿ ಹೇಳಿ ಕೊಂಡಿದ್ದಾರೆ. ನನ್ನ ಎರಡನೇ ಚಿತ್ರದ ಚಿತ್ರಿಕರಣ ವೇಳೆ ಜೂನಿಯರ್ ನಟಿ ತಮಗಾದ ಅನುಭವ ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.
ಟ್ರಿಪ್‌ಗೆ ಬಂದ್ರೆ ಹೀರೋಯಿನ್ ಮಾಡ್ತೀನಿ ಅಂದ್ರಿದ್ರು
ಜೂನಿಯರ್ ನಟಿಯೊಬ್ಬರು ಒಂದು ಸಿನಿಮಾಗಾಗಿ ಆಡಿಷನ್ ಕೊಟ್ಟಿದ್ರಂತೆ. ಮೊದಲ ರೌಂಡ್‌ನಲ್ಲಿ ಸೆಲೆಕ್ಟ್ ಆಗಿದ್ದೀರಾ ಅಂತ ಅವರು ಆಕೆಗೆ ಹೇಳಿದ್ರಂತೆ. ನಂತರ ಕಾಲ್ ಮಾಡಿ ನಮ್ಮ ಜೊತೆ ಟ್ರಿಪ್‌ಗೆ ಬನ್ನಿ ನಿಮ್ಮನ್ನ ನಾಯಕಿ ಮಾಡ್ತೀನಿ ಅಂದ್ರಂತೆ ಎಂದು ನಟಿ ಚೈತ್ರಾ ಆಚಾರ್ ಹೇಳಿದ್ದಾರೆ.
ಇನ್ನೂ, ನನಗೆ ಈ ರೀತಿಯ ಅನುಭವ ಆಗಿಲ್ಲ. ಆದರೆ ಕಮಿತಿ ಬಂದ್ರೆ ನಟಿಯರಿಗೆ ಅನುಕೂಲ ಆಗಲಿದೆ. ಆವಾಗ ಯಾರಿಗೆ ಏನೇ ಸಮಸ್ಯೆ ಬಂದ್ರು ಕಮಿಟಿ ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…