ಬೆಂಗಳೂರು: ಅಕ್ರಮ ಮಗು ದತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ.
ಸೋನು ಶ್ರೀನಿವಾಸ್ ಗೌಡ ಅವರಿಗೆ ಬೆಂಗಳೂರು ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸೋನು ಗೌಡ ಅವರು ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
8 ವರ್ಷದ ಹೆಣ್ಣು ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಮಾರ್ಚ್ 22 ರಂದು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿತ್ತು.