ಮನರಂಜನೆ

ಸೈಮಾದಲ್ಲಿ ಕನ್ನಡಿಗರಿಗೆ ಅವಮಾನ : ನಡೆದ ಘಟನೆ ವಿವರಿಸಿದ ನಟ ದುನಿಯಾ ವಿಜಯ್

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ನಡೆದ ಅವಮಾನವನ್ನು ನಟ ದುನಿಯಾ ವಿಜಯ್ ನೇರವಾಗಿ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಇನ್ನೂ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ನಟ ದುನಿಯಾ ವಿಜಯ್, ನಿನ್ನೆ ಸೈಮಾನಲ್ಲಿ ನಡೆದಿದ್ದೇನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ.

ಇನ್ನು ಮುಂದೆ ನಾನು ಸೈಮಾಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ನಾನು ಮಾತ್ರವಲ್ಲ ನಾಳೆ ನನ್ನ ಮಕ್ಕಳಿಗೆ ಪ್ರಶಸ್ತಿ ಕೊಟ್ಟರೂ ಅದನ್ನೂ ಸ್ವೀಕರಿಸದಿರುವಂತೆ ಹೇಳಲಿದ್ದೇನೆ ಎಂದು ಬಲು ಬೇಸರದಿಂದಲೇ ಹೇಳಿದರು.

ಇದನ್ನು ಓದಿ:ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

ಮುಂದುವರೆದು ಮಾತನಾಡಿದ ಅವರು, ಮೊದಲು ತೆಲುಗು ನಟರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಆದರೆ ಕನ್ನಡಿಗರಿಗೆ ಪ್ರಶಸ್ತಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಡ ಮಾಡಿದರು. ಉದ್ದೇಶಪೂರ್ವಕವಾಗಿ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ಕನ್ನಡದ ಎಲ್ಲ ನಟ-ನಟಿಯರು, ತಂತ್ರಜ್ಞರು ಕೊನೆಯವರೆಗೆ ಕಾದು ಕುಳಿತುಕೊಳ್ಳುವಂತಾಯಿತು. ಕನ್ನಡದ ನಟ-ನಟಿಯರು ವೇದಿಕೆ ಮೇಲೆ ಹೋಗುವ ವೇಳೆಗೆ ಬೇರೆ ಭಾಷೆಯ ಯಾವೊಬ್ಬ ಕಲಾವಿದರೂ ಅಲ್ಲಿರಲಿಲ್ಲ. ನಾವು ಕೇವಲ ಕ್ಯಾಮೆರಾ ಫುಟೇಜ್​​ಗಾಗಿ ವೇದಿಕೆ ಮೇಲೆ ಹೋದಂತಾಯಿರು. ಇದು ಸ್ಪಷ್ಟವಾಗಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ದುನಿಯಾ ವಿಜಯ್ ಹೇಳಿದರು.

ಇಂತಹ ಅಪಮಾನ ಮೊದಲೇನೂ ಅಲ್ಲ, ಹಲವು ಕಡೆಗಳಲ್ಲಿ ಕನ್ನಡಿಗರಿಗೆ ಹೀಗೆ ಅವಮಾನ ಮಾಡಲಾಗಿದೆ. ಉಪೇಂದ್ರ ಅವರು ಎಂಥಹಾ ಲಿಜೆಂಡ್ ಅವರೂ ಸಹ ಪಾಪ ಕೊನೆಯ ವರೆಗೆ ಕಾದು ಕೂತಿದ್ದರು, ಅವರೂ ಸಹ ಆಯೋಜಕರ ಈ ದುರ್ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಾನು ವೇದಿಕೆ ಮೇಲೆ ಮಾತುಗಳಿಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರಿಯಾಗಿ ಮಾತನಾಡಿದಿರಿ ಎಂದು ಬೆನ್ನು ತಟ್ಟಿದರು’ ಎಂದರು ವಿಜಿ.

ಇಲ್ಲಿ ಮುಖ್ಯವಾದ ಸಮಸ್ಯೆ ಇರುವುದು ಆಯೋಜಕರದ್ದು. ಯಾರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಮಾಹಿತಿ ಅವರಿಗೆ ಇಲ್ಲ. ತೆಲುಗಿಗೆ ಒಂದು ಪ್ರಶಸ್ತಿ, ಕನ್ನಡಕ್ಕೆ ಒಂದು ಪ್ರಶಸ್ತಿ ಕೊಡುತ್ತಾ ಹೋಗಬಹುದು ಆದರೆ ಅದರ ಬದಲು ಕನ್ನಡಕ್ಕೆ ಕೊನೆಯದಾಗಿ ಕೊಟ್ಟರು. ಸುದೀಪ್ ಅವರ ಹೆಸರು ಹೇಳುವ ಸಂದರ್ಭದಲ್ಲಿ ಆಡಿಟೋರಿಯಂನಲ್ಲಿ ಒಬ್ಬರು ಸಹ ಇರಲಿಲ್ಲ. ಈಗ ನಾವು ಕನ್ನಡಿಗರು ಒಟ್ಟಾಗಿ ಒಂದು ನಿರ್ಣಯ ತೆಗೆದುಕೊಂಡು ಮುಂದಿನ ವರ್ಷ ಸೈಮಾ ಅನ್ನು ಬಾಯ್​​ಕಾಟ್ ಮಾಡಬೇಕು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

3 seconds ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

2 mins ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

5 mins ago

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

37 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

1 hour ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

1 hour ago