ಮಹಾರಾಷ್ಟ್ರ: ಸೌತ್ ಇಂಡಿಯನ್ ಸ್ಟಾರ್ ನಟಿ ತಮನ್ನಾ ಅವರು ಮಹದೇವ್ ಬೆಟ್ಟಿಂಗ್ ಆಪ್‌ನ ಅಂಗಸಂಸ್ಥೆಯಾದ fairplay ಅಪ್ಲಿಕೇಷನ್‌ಗೆ ಪ್ರಚಾರ ಹಾಗೂ ಪ್ರತಿನಿಧಿಸಿದ ಆರೋಪದ ಹಿನ್ನಲೆಯಲ್ಲಿ ಮುಂಬೈನ ಸೈಬರ್ ಕ್ರೈಂ ಪೊಲೀಸರು ಸಮನ್ಸ್ ನೀಡಿದ್ದಾರೆ.
2023ರ ಐಪಿಎಲ್ ಪಂದ್ಯವನ್ನು fairplay ಅಪ್ಲಿಕೇಷನ್‌ನಲ್ಲಿ ಅಕ್ರಮವಾಗಿ ನೇರಪ್ರಸಾರ ಮಾಡುವ ಮೂಲಕ ವಯಕಾಮ್ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ತಮನ್ನಾ ಏಪ್ರಿಲ್ 29ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.
ಇವರ ಜೊತೆಗೆ ನಟ ಸಂಜಯ್ ದತ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ, ತಾವು ವಿದೇಶದಲ್ಲಿರುವುದರಿಂದ ವಿಚಾರಣೆಗೆ ಬೇರೆ ಸಮಯ, ದಿನಾಂಕ ನಿಗದಿ ಮಾಡುವಂತೆ ಅವರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
2023ರ ಐಪಿಎಲ್ ಪಂದ್ಯವಳಿಗಳನ್ನು ಫೇರ್‌ಪ್ಲೇ ಅಪ್ಲಿಕೇಷನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗಿತ್ತು. ಈ ಆಪ್‌ಗೆ ತಮನ್ನಾ ಪ್ರಚಾರ ಮಾಡಿದ್ದರು ಎಂದು ದೂರು ದಾಖಲಾಗಿದೆ. ಇವರೊಂದಿಗೆ ನಟ ಸಂಜಯ್ ದತ್, ಜಾಕ್ವೆಲಿನ್ ಫರ್ನಾಂಡಿಸ್ ಅವರ ಮ್ಯಾನೇಜರ್‌ಗಳ ಹೇಳಿಕೆಯನ್ನು ಮಹಾರಾಷ್ಟ್ರ ಕ್ರೈಂ ವಿಭಾಗದ ಪೊಲೀಸರು ಪಡೆದಿದ್ದಾರೆ ಎನ್ನಲಾಗಿದೆ.
ಈಗಾಗಲೇ ಮಹದೇವ ಬೆಟ್ಟಿಂಗ್ ಆಪ್‌ನ ಅಕ್ರಮ ಮತ್ತು ಬೆಟ್ಟಿಂಗ್ ಕುರಿತು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿದೆ. ಇದರೊಂದಿಗೆ ತಮನ್ನಾ, ಸಂಜಯ್ ದತ್ ಅವರಿಗೆ ಕ್ರೈಂ ಬ್ರಾಂಚ್ ಪೊಲೀಸರು ಸಮನ್ಸ್ ನೀಡಿದ್ದಾರೆ.
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…