ಚೆನ್ನೈ : ವಿಶ್ವ ಮೆಚ್ಚಿದ ಸೂಪರ್ ಸ್ಟಾರ್, ಕ್ರೇಜ್ ಕಾ ಬಾಪ್ ರಜನಿಕಾಂತ್ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ.
ರಜನಿಕಾಂತ್ ಅವರಿಗೆ ಟ್ರೆಂಡ್‌ಗೆ ತಕ್ಕಂತೆ ಸಿನಿಮಾ ಮಾಡಿ ಸೈ ಅನ್ನಿಸಿಕೊಂಡು ಅದನ್ನ ಗೆಲ್ಲಿಸುವ ತಾಕತ್ತು ಇದೆ. ಇದೀಗ ತಲೈವಾ ರಜನಿಕಾಂತ್ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಗಳಾಗುತ್ತಿವೆ.
ಸದ್ಯಕ್ಕೆ ತಲೈವಾ ಕೈಯಲ್ಲಿ ನೂರಾರು ಕೋಟಿಯ ನಾಲ್ಕು ಪ್ರಾಜೆಕ್ಟ್‌ಗಳಿವೆ. `ಜೈಲರ್ 2′ ಸಿನಿಮಾವನ್ನೂ ಪೂರ್ಣಗೊಳಿಸಿದ್ದಾರೆ. ಕಮಲ್ ಹಾಸನ್ ಜೊತೆಗಿನ ಕಾಂಬೋ ಚಿತ್ರ ಘೋಷಣೆಯಾಗಿದೆ. ಡೈರೆಕ್ಟರ್ ನೆಲ್ಸನ್ ಜೊತೆ ಇನ್ನೊಂದು ಚಿತ್ರವೂ ಫಿಕ್ಸ್ ಆಗಿದೆ. ಇಷ್ಟೇ ಅಲ್ಲ ನಿರ್ಮಾಪಕ ಸಿ ಸುಂದರ್ ಜೊತೆಯೂ ರಜನಿಕಾಂತ್ ಡೇಟ್ ಇದೆ. ಹೀಗೆ ಸದ್ಯಕ್ಕೆ ರಜನಿಕಾಂತ್ ಇನ್ನೂ 2027ರವರೆಗೆ ಶೂಟಿಂಗ್ ಮಾಡಿದರೂ ಮುಗಿಯದಷ್ಟು ಪ್ರಾಜೆಕ್ಟ್‌ಗಳನ್ನ ಇಟ್ಟುಕೊಂಡಿದ್ದಾರೆ. ಆದರೆ ಈ ಹೊತ್ತಲ್ಲೇ ರಜನಿಕಾಂತ್ ನಿವೃತ್ತಿ ತೆಗೆದುಕೊಳ್ಳಲು ನಿರ್ಧರಿಸಿರುವುದರ ಮಾತು ಕೇಳಿಬರುತ್ತಿದೆ.
ಇದನ್ನು ಓದಿ: ಮೈಸೂರಲ್ಲಿ ರಜನಿಕಾಂತ್ : ಅಭಿಮಾನಿಗಳಿಗೆ ನಮಸ್ಕರಿಸಿದ ತಲೈವಾ
ತಲೈವಾ ಕುರಿತು ನಿವೃತ್ತಿ ಮಾತು ಕೇಳಿಬರ್ತಿರೋದು ಇದೇ ಮೊದಲಲ್ಲ. ರಜನಿಕಾಂತ್ ತಮ್ಮ ಮನೆಗೆ ಕಥೆ ಪಟ್ಟಿ ಹಿಡ್ಕೊಂಡು ಬರುವ ನಿರ್ದೇಶಕ ಹಾಗೂ ಚೆಕ್‌ಬುಕ್ ಹಿಡ್ಕೊಂಡು ಬರುವ ನಿರ್ಮಾಪಕರನ್ನ ವಾಪಸ್ ಕಳುಹಿಸುತ್ತಿದ್ದಾರಂತೆ. ಇದೇ ವಿಚಾರಕ್ಕೆ ರಜನಿಕಾಂತ್ ವಿದಾಯ ಹೇಳುವ ಸುದ್ದಿ ಗುಲ್ಲಾಗಿದೆ. ಹಾಗಂತ ಅವರು ರಾಜಕೀಯ ಎಂಟ್ರಿ ಮಾಡ್ತಿದ್ದಾರೆ ಅಂತೇನಿಲ್ಲ, ಕಾರಣ ಮಾತ್ರ ಬೇರೆಯೇ ಇದೆ. ರಜನಿಕಾಂತ್ ವಯಸ್ಸು ಏರುತ್ತಿದೆ. 70 ವರ್ಷ ವಯಸ್ಸು ದಾಟಿದ ಬಳಿಕ ಸಹಜವಾಗೇ ದೇಹ ಕ್ವೀಣಿಸುತ್ತದೆ, ಸುಸ್ತೂ ಜಾಸ್ತಿ ಆಗುತ್ತದೆ. ಹಾಗಂತ ಇದುವೇ ವಿದಾಯಕ್ಕೆ ರೀಸನ್ ಅಲ್ವೇ ಅಲ್ಲ.ರಜನಿಕಾಂತ್ ಮನಸ್ಸು ಆಧ್ಯಾತ್ಮದತ್ತ ಹೆಚ್ಚಾಗಿ ವಾಲುತ್ತಿದೆ.
ಸರಳವಾಗಿ ಬದುಕೋದನ್ನ ಜೀವನದಲ್ಲಿ ರೂಢಿಸಿಕೊಂಡು ಬಂದವರು ರಜನಿ. ಹೀಗಾಗಿ ವರ್ಷಕ್ಕೊಮ್ಮೆಯಾದ್ರೂ ಆಧ್ಯಾತ್ಮಿಕ ಪ್ರವಾಸ ಮಾಡ್ತಾರೆ. ಮನಸ್ಸಾದಾಗೆಲ್ಲ ಕಾರು ಹತ್ತಿ, ಹುಟ್ಟೂರು ಬೆಂಗಳೂರಿಗೆ ಬಂದು ಯಾರಿಗೂ ಗೊತ್ತಾಗದಂತೆ ಇದ್ದುಬಿಡ್ತಾರೆ. ಇಂಥಹ ರಜನಿಕಾಂತ್ ಎಲ್ಲಾ ಮೋಹಗಳನ್ನೂ ತ್ಯಜಿಸಿ ಜೀವಿಸುತ್ತಿರುವ ವ್ಯಕ್ತಿ. ವಯಸ್ಸು ಮಾಗಿದಂತೆ ಮನಸ್ಸೂ ಮಾಗುತ್ತಿದೆ. ಹೀಗಾಗಿ ಕೈಯಲ್ಲಿದ್ದ ಪ್ರಾಜೆಕ್ಟ್‌ಗಳನ್ನ ಮುಗಿಸಿಕೊಟ್ಟು, ಬಳಿಕ ನೋಡಿದ್ರಾಯ್ತು ಎಂದು ಯಾವುದೇ ಪ್ರಾಜೆಕ್ಟ್‌ಗಳನ್ನ ರಜನಿ ಒಪ್ಪಿಕೊಳ್ತಿಲ್ಲ. ಹೀಗಾಗಿ ರಜನಿಕಾಂತ್ ಚಿತ್ರರಂಗಕ್ಕೆ ವಿದಾಯದ ಎಲ್ಲೆಡೆ ಸುದ್ದಿ ಚರ್ಚೆಯಾಗುತ್ತಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…